ಡಿ.4ಕ್ಕೆ ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗಮನ

| Published : Dec 04 2024, 12:30 AM IST

ಡಿ.4ಕ್ಕೆ ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗಮನ
Share this Article
  • FB
  • TW
  • Linkdin
  • Email

ಸಾರಾಂಶ

BJP state president Vijayendra will arrive in the city on December 4

ಶಹಾಪುರ: ರೈತರ ಮತ್ತಿತರರ ಪಹಣಿಗಳಲ್ಲಿ ವಕ್ಫ್‌ ಬೋರ್ಡ್ ಎಂದು ಸೇರಿಸುವ ಮೂಲಕ ರೈತರಿಗೆ ಅನ್ಯಾಯ ಮಾಡುತ್ತಿರುವುದರ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಡಿ.4 ರಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ್ ಯಾಳಗಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಲ್ಲೆಡೆ ನುಸುಳುಕೋರರಂತೆ ವಕ್ಫ್‌ ಬೋರ್ಡ್ ಕೆಲಸ ಮಾಡುತ್ತಿರುವುದನ್ನು ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷರ ಜೊತೆಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಜನಾರ್ದನ ರೆಡ್ಡಿ, ಮಾಜಿ ಸಚಿವ ರಾಜೂಗೌಡ, ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಈ ಪ್ರತಿಭಟನೆಯು ಡಿ.4 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಚರಬಸವೇಶ್ವರ ಕಮಾನದಿಂದ ಬಸವೇಶ್ವರ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.

------

ಫೋಟೊ: 3ವೈಡಿಆರ್13: ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷರು.