ಇಂದು ಹೊನ್ನಾಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

| Published : Dec 08 2024, 01:19 AM IST

ಇಂದು ಹೊನ್ನಾಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್ ಮಾತನಾಡಿದರು.

ಹೊನ್ನಾಳಿ: ಡಿ.8 ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೊನ್ನಾಳಿಗೆ ಭೇಟಿ ನೀಡಲಿದ್ದಾರೆಃ- ಹೊನ್ನಾಳಿ ಬಿಜೆಪಿ, ಅಧ್ಯಕ್ಷ ಜೆ.ಕೆ.ಸುರೇಶ್.ಕನ್ನಡಪ್ರಭ ವಾರ್ತೆ ಹೊನ್ನಾಳಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಡಿ.8ರ ಭಾನುವಾರ ಮಧ್ಯಾಹ್ನ 1 ಗಂಟೆಗೆ ಹೊನ್ನಾಳಿಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್ ತಿಳಿಸಿದರು.

ಶನಿವಾರ ಹೊನ್ನಾಳಿಯ ತಮ್ಮ ನಿವಾಸದಲ್ಲಿ ಬಿಜೆಪಿ ಮುಖಂಡರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿ.ವೈ.ವಿಜಯೇಂದ್ರ ಅವರು ಶಿಕಾರಿಪುರದಿಂದ

ಹರಿಹರ ತಾಲೂಕಿನ ನಂದಿಗುಡಿಯಲ್ಲಿ ಜರುಗಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದು ಮಾರ್ಗ ಮಧ್ಯದಲ್ಲಿ ಹೊನ್ನಾಳಿಗೆ ಅಗಮಿಸಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನಿವಾಸಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಬಿಜೆಪಿ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಲಿದ್ದಾರೆ ಎಂದು ಹೇಳಿದರು.

ನಂತರ ಪಟ್ಟಣದ ಸಂಗೊಳ್ಳಿ ರಾಯಣ್ಣ ಮತ್ತು ದೇವನಾಯಕನ ಹಳ್ಳಿಯಲ್ಲಿರುವ ಕನಕದಾಸ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಸಿದ ನಂತರ ನಂದಿಗುಡಿಗೆ ಪ್ರಯಾಣ ಬೆಳಸಲಿದ್ದಾರೆ. ಈ ಸಂದರ್ಭದಲ್ಲಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳ ಪಕ್ಷದ ಪದಾಧಿಕಾರಿಗಳು, ಮುಖಂಡರು,ಕಾರ್ಯಕರ್ತರು ಭಾನುವಾರ ಹೊನ್ನಾಳಿಗೆ ಅಗಮಿಸಿ ರಾಜ್ಯಾಧ್ಯಕ್ಷರ ಭೇಟಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

*ಬಿಜೆಪಿ ಮುಖಂಡ ಶಾಂತರಾಜ್ ಪಾಟೀಲ್ ಹೇಳಿಕೆಗೆ ಖಂಡನೆಃ ದಾವಣಗೆರೆಯಲ್ಲಿ ಬಿಜೆಪಿ ಜಿಲ್ಲಾ ಮುಖಂಡ ಶಾಂತರಾಜ್ ಪಾಟೇಲ್ ಹಾಗೂ ಕೆಲವರು ಸುದ್ದಿಗೋಷ್ಠಿ ನಡೆಸಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರನ್ನು ಉಚ್ಚಾಟಿಸಲು ತಿಂಗಳೊಳಗೆ ದೆಹಲಿಯ ಬಿಜೆಪಿ ಪಕ್ಷದ ವರಿಷ್ಠರಿಗೆ ದೂರು ನೀಡುವುದಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ತಾಲೂಕು ಅಧ್ಯಕ್ಷ ಜೆ. ಕೆ. ಸುರೇಶ್ ಹೇಳಿದರು.

ಎಂ.ಪಿ.ರೇಣುಕಾಚಾರ್ಯ ಗೆದ್ದರೂ ಸರಿ, ಸೋತರೂ ಸರಿ ನಿರಂತರವಾಗಿ ಪಕ್ಷದ ಸಂಘಟನೆಗೆ ಕೆಲಸ ಮಾಡುತ್ತಿದ್ದಾರೆ. ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳಲ್ಲಿ ಬಿಜೆಪಿ ಬಲಿಷ್ಠವಾಗಿ ಸಂಘಟನೆಯಾಗಿರುವುದರಲ್ಲಿ ರೇಣುಕಾಚಾರ್ಯರ ಸೇವೆ, ಪರಿಶ್ರಮ ಅಮೂಲ್ಯವಾದದ್ದು ಎಂದರು.

ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೆ.ಪಿ.ಕುಬೇಂದ್ರಪ್ಪ ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ನೆಲಹೊನ್ನೆ ಮಂಜುನಾಥ್, ಎಸ್.ಎಸ್. ಬೀರಪ್ಪ, ದಿಡಗೂರು ಪಾಲಾಕ್ಷಪ್ಪ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.