ಸಾರಾಂಶ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಪಂ ಸದಸ್ಯರ ಒಕ್ಕೂಟ ಚಾಮರಾಜನಗರ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಬಿಜೆಪಿ ಮುಖಂಡರು ಭಾಗವಹಿಸಿ ಬೆಂಬಲ ಸೂಚಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ಚಾಮರಾಜನಗರ ಜಿಲ್ಲಾ ಸಮಿತಿ ಅವರ ನೇತೃತ್ವದಲ್ಲಿ ಆರ್‌ಡಿಪಿಆರ್ ಕುಟುಂಬದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲಾಡಳಿತ ಭವನದ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಮುಖಂಡರು ಭಾಗವಹಿಸಿ ಬೆಂಬಲ ಸೂಚಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಮಾತನಾಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದೊಡ್ಡ ಇಲಾಖೆಯಾಗಿದ್ದು ಬಹುತೇಕ ಸಾರ್ವಜನಿಕ ಕೆಲಸಗಳು ಇಲ್ಲಿ ಆಗುತ್ತದೆ. ಈ ಇಲಾಖೆ ನಿರ್ವಹಿಸುವಲ್ಲಿ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಸಂಪೂರ್ಣ ವಿಫಲರಾಗಿದ್ದಾರೆ. ಪಂಚಾಯತ್ ರಾಜ್ ಇಲಾಖೆಯನ್ನು ಗಂಭೀರವಾಗಿ ಪರಿಗಣಿಸದ ಅವರನ್ನು ಇಲಾಖೆಯ ಸಚಿವ ಸ್ಥಾನದಿಂದ ಬದಲಾಯಿಸಿ ಅನುಭವ ಉಳ್ಳ ಹಿರಿಯನ್ನು ಸಚಿವರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು. ಇಲಾಖೆಯ ಅಧಿಕಾರಿಗಳ, ಜನಪ್ರತಿನಿಧಿ ಬೇಡಿಕೆಗಳನ್ನು ನ್ಯಾಯಯುತವಾಗಿದ್ದು, ಪಂಚಾಯತ್ಳಿ ಇಲಾಖೆಗೆ ಒಂದು ಗೌರವ ಇದೆ. ಈಗಾಗಲೇ ಸರ್ಕಾರ ಬೇಡಿಕೆಗಳನ್ನು ಈಡೇರಿಸಲು ವಿಳಂಬ ಮಾಡಿದೆ. ಕೂಡಲೇ ಸಿಎಂ ಗಂಭೀರವಾಗಿ ಪರಿಗಣಿಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಪ್ರತಿಭಟನೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತುಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ನೌಕರರು, ಜನಪ್ರತಿನಿಧಿಗಳು ಭಾಗವಹಿಸಿದ್ದರು.