ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರುಸೇನೆಯಲ್ಲಿ ಸೇವೆ ಸಲ್ಲಿಸಿರುವ ಕ್ಯಾ. ಬ್ರಿಜೇಶ್ ಚೌಟ ಬಿಜೆಪಿಯ ಸಮರ್ಥ ಅಭ್ಯರ್ಥಿಯಾಗಿದ್ದು, ಮುಂಬರುವ ಚುನಾವಣೆಯಲ್ಲಿ ಟೀಂ ವರ್ಕ್ ಮಾಡುವ ಮುಖೇನ ಅವರ ಗೆಲವಿಗೆ ದುಡಿಯಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.ನಗರದ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಭಾನುವಾರ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.ಕಳೆದ ಮೂರು ಅವಧಿಗಳಲ್ಲಿ ಯಶಸ್ವಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಇದೀಗ ಸಂಘಟನೆ ಯಾವುದೇ ಕೆಲಸ ಮಾಡು ಅಂತ ಹೇಳಿದರೆ ಅಷ್ಟೇ ಸಂತೋಷದಿಂದ ಸ್ವೀಕರಿಸುತ್ತೇನೆ. ಇದೀಗ ಜಿಲ್ಲೆಯಲ್ಲಿದ್ದ ಎಲ್ಲ ರೀತಿಯ ಗೊಂದಲಗಳು ಅಂತ್ಯಗೊಂಡು ಪ್ರಫುಲ್ಲವಾದ ಬಿಜೆಪಿ ಪರವಾದ ವಾತಾವರಣ ನಿರ್ಮಾಣಗೊಂಡಿದೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಜವಾಬ್ದಾರಿ ತೆಗೆದುಕೊಂಡಿರುವ ಎಲ್ಲ ಕಾರ್ಯಕರ್ತರು, ಮುಖಂಡರು ಉತ್ಸಾಹದಿಂದ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಸಂತಸ ತಂದಿದೆ ಎಂದರು.ಮುಂದೆ ಚುನಾವಣಾ ಕಾರ್ಯವನ್ನು ಪರಿಣಾಮಕಾರಿಯಾಗಿ ಬೂತ್ ಮಟ್ಟದವರೆಗೆ ತೆಗೆದುಕೊಂಡು ಹೋಗುವ ಬಗ್ಗೆ ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ವಿವರವಾಗಿ ಚರ್ಚಿಸಿ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು.ಶಾಸಕ ಡಿ. ವೇದವ್ಯಾಸ ಕಾಮತ್, ಮುಖಂಡರಾದ ನಿತಿನ್ ಕುಮಾರ್, ಗೋಪಾಲಕೃಷ್ಣ ಹೇರಳೆ, ಪ್ರಸಾದ್ ಕುಮಾರ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಹಾಗೂ ಪದಾಧಿಕಾರಿಗಳು, ಮುಖಂಡರು ಭಾಗವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಸ್ವಾಗತಿಸಿದರು. ಯತೀಶ್ ಆರ್ವಾರ್ ವಂದಿಸಿದರು.ಬಾಕ್ಸ್‌ಚೌಟ ಗೆಲುವಿಗೆ ಪೂರ್ಣ ಪ್ರಯತ್ನ: ನಳಿನ್ ಕುಮಾರ್‌ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ನಾನು ಪೂರ್ಣ ಪ್ರಮಾಣದಲ್ಲಿ ಇಳಿದಿದ್ದೇನೆ. ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಪೂರ್ಣ ಪರಿಶ್ರಮ ಹಾಕುತ್ತೇನೆ. ನನ್ನ ಗೆಲುವಿನ ದಾಖಲೆ ಮುರಿದು 3.5 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಲು ಎಲ್ಲ ಪ್ರಯತ್ನ ನಡೆಸುತ್ತೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ರಾಷ್ಟ್ರೀಯ ನಾಯಕರು ಕೇರಳದಲ್ಲಿ ಚುನಾವಣಾ ಉಸ್ತುವಾರಿ ನೋಡಿಕೊಳ್ಳಲು ಹೇಳಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಹೆಚ್ಚಿನ ಗಮನ ಕೊಟ್ಟು ವರಿಷ್ಠರು ಸೂಚನೆ ನೀಡಿದಂತೆ ಕಾರ್ಯ ನಿರ್ವಹಿಸಲಿದ್ದೇನೆ ಎಂದು ತಿಳಿಸಿದರು.6 ತಿಂಗಳಲ್ಲಿ ವಿ.ಸಭೆ ಚುನಾವಣೆ: ಲೋಕಸಭೆ ಚುನಾವಣೆ ಮುಗಿದು 6 ತಿಂಗಳಲ್ಲಿ ವಿಧಾನಸಭೆ ನಡೆಯುವ ಎಲ್ಲ ವಿಶ್ವಾಸಗಳಿವೆ ಎಂದು ನಳಿನ್ ಕುಮಾರ್ ಹೇಳಿದರು. ಈಶ್ವರಪ್ಪ ಅವರು ಹಿರಿಯರಿದ್ದಾರೆ. ಅವರ ಬಳಿ ಪಕ್ಷದ ವರಿಷ್ಠರು ಮಾತುಕತೆ ಮಾಡಲಿದ್ದು, ಎಲ್ಲವೂ ಸರಿಯಾಗಲಿದೆ ಎಂದರು.