ಮುಂಬರುವ 2028ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ : ಶಾಸಕ ಗಾಲಿ ಜನಾರ್ದನ ರೆಡ್ಡಿ

| Published : Jan 20 2025, 01:34 AM IST / Updated: Jan 20 2025, 12:22 PM IST

ಮುಂಬರುವ 2028ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ : ಶಾಸಕ ಗಾಲಿ ಜನಾರ್ದನ ರೆಡ್ಡಿ
Share this Article
  • FB
  • TW
  • Linkdin
  • Email

ಸಾರಾಂಶ

ಮುಂಬರುವ 2028ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

 ಮಾನ್ವಿ : ಮುಂಬರುವ 2028ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಕೆಎಸ್ಎನ್ ಸಮಾಜಿಕ ಸೇವಾ ಸಮಿತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿ, ಮಾಜಿ ಕೇಂದ್ರ ಸಚಿವರಾಗಿದ್ದ ಸುಷ್ಮಸ್ವರಾಜ್ ನೇತೃತ್ವದಲ್ಲಿ ಬಳ್ಳಾರಿಯಲ್ಲಿ 25 ವರ್ಷಗಳಿಂದ 50 ಸಾವಿರ ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಮಾಜಿ ಸಚಿವ ಕೆ.ಶಿವನಗೌಡ ನಾಯಕ ಅವರು ಅದೇ ಮಾದರಿಯಲ್ಲಿ ಸಮಾರಂಭವನ್ನು ನಡೆಸಿದ್ದಾರೆ ಎಂದರು.

ದೇವದುರ್ಗದ ಮಾಜಿ ಶಾಸಕರಾಗಿದ್ದರೂ ಕೂಡ ತಮ್ಮ ಪೂರ್ವಜರ ಹುಟ್ಟುರಿನ ನೆನಪಿಗಾಗಿ ತಾಲೂಕಿನ ಜನರ ಋಣವನ್ನು ತೀರಿಸುವ ಹಾಗೂ ಬಡ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಉಚಿತ ಸಾಮೂಹಿಕ ಮದುವೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. 2028ಕ್ಕೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲ್ಲಿದ್ದು ಈ ಭಾಗದಲ್ಲಿ ಮತ್ತೆ ಶಾಸಕರಾಗಿ ಕೆ.ಶಿವನಗೌಡನಾಯಕ, ಬಿ.ವಿ. ನಾಯಕ, ಬಸವರಾಜ ಧಡೆಸೂಗೂರು ಜನರಿಂದ ಆಯ್ಕೆಯಾಗಿ ಅಭಿವೃದ್ದಿ ಕಾರ್ಯಕೈಗೊಳ್ಳಲಿದ್ದಾರೆ ಎಂದು ಭವಿಷ್ಯ ನುಡಿದರು.

ಉಚಿತ ಸಾಮೂಹಿಕ ವಿವಾಹದಲ್ಲಿ 111 ಸರ್ವಧರ್ಮ ಜೋಡಿಗಳು ವಿವಾಹವಾಗಿ ದಂಪತ್ಯ ಜೀವನಕ್ಕೆ ಕಾಲಿಟ್ಟರು. ಸಾಮೂಹಿಕ ವಿವಾಹಕ್ಕೆ ಆಗಮಿಸಿದ ಸಾರ್ವಜನಿಕರಿಗೆ ಅಗತ್ಯ ಊಟದ ಸೌಲಭ್ಯ ಕಲ್ಪಿಸಲಾಯಿತು.

ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರವರನ್ನು ಮುಖ್ಯ ಬೀದಿಯಿಂದ ಸಮಾರಂಭ ನಡೆಯುವ ವೇದಿಕೆಯವರೆಗೂ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಅಭಿಮಾನಿಗಳು ಜೆಸಿಬಿಗಳಿಂದ ನಾಯಕರಿಗೆ ಪುಷ್ಪ ವೃಷ್ಟಿ ಮಾಡಿದರು.