ಸಾರಾಂಶ
ಬಿಜೆಪಿ ಉಡುಪಿ ನಗರ ಹಾಗೂ ಮಹಿಳಾ ಮೋರ್ಚಾ ಉಡುಪಿ ನಗರ ನೇತೃತ್ವದಲ್ಲಿ ಕಾರ್ಮಿಕರ ದಿನಾಚರಣೆಯು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಈ ದಿನಾಚರಣೆ ಪ್ರಯುಕ್ತ ಮಹಿಳಾ ಬೀಡಿ ಕಾರ್ಮಿಕರನ್ನು ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಬಿಜೆಪಿ ಉಡುಪಿ ನಗರ ಹಾಗೂ ಮಹಿಳಾ ಮೋರ್ಚಾ ಉಡುಪಿ ನಗರ ನೇತೃತ್ವದಲ್ಲಿ ಕಾರ್ಮಿಕರ ದಿನಾಚರಣೆಯು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಈ ದಿನಾಚರಣೆ ಪ್ರಯುಕ್ತ ಮಹಿಳಾ ಬೀಡಿ ಕಾರ್ಮಿಕರನ್ನು ಸನ್ಮಾನಿಸಲಾಯಿತು.ಈ ಸಂದರ್ಭ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಉಡುಪಿ ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ನಿಕಟಪೂರ್ಣ ಜಿಲ್ಲಾ ಮಹಿಳಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಕಲ್ಮಾಡಿ, ಪಕ್ಷದ ಪ್ರಮುಖರು ಹಾಗೂ ಜಿಲ್ಲಾ ಮತ್ತು ಉಡುಪಿ ನಗರ ಮಹಿಳಾ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.ಉಡುಪಿ ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಂತಿ ಮನೋಜ್ ಕಾರ್ಯಕ್ರಮ ನಿರೂಪಿಸಿದರು. ಚಂದ್ರಿಕಾ ನಾಯಕ್ ವಂದಿಸಿದರು.