ಸಾರಾಂಶ
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಗುಬ್ಬಿ ತಾಲೂಕಿನ ಹೊಸಕೆರೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಕನ್ನಡಪ್ರಭ ವಾರ್ತೆ ಗುಬ್ಬಿ
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಗುಬ್ಬಿ ತಾಲೂಕಿನ ಹೊಸಕೆರೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಇದೇ ವೇಳೆ ಮಾತನಾಡಿದ ತಾಲೂಕು ಉಪಾಧ್ಯಕ್ಷ ಎಕೆಪಿ ರಾಜು , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಯೋಜನೆಗಳಿಂದ ದೆಹಲಿಯಲ್ಲಿ ದೊಡ್ಡ ಮಟ್ಟದ ಜಯ ಸಾಧಿಸಿದೆ. ಇದು ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಸಿಕ್ಕ ಗೆಲುವು. ಇದರಿಂದ ಮತ್ತಷ್ಟು ಕಾರ್ಯಕರ್ತರಿಗೂ ಹುಮ್ಮಸ್ಸು ಹೆಚ್ಚಾಗಿದೆ. ಮುಂದಿನ ಚುನಾವಣೆ ಕರ್ನಾಟಕದಲ್ಲಿ ಕೂಡ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ. ನಾವೆಲ್ಲ ಕಾರ್ಯಕರ್ತರ ಒಗಟ್ಟಾಗಿ ಮತ್ತೆ ಮೋದಿ ಅವರನ್ನು ಈ ದೇಶದ ಪ್ರಧಾನಿಯಾಗಿ ಮಾಡಬೇಕು. ಅದರಿಂದ ಕಾರ್ಯಕರ್ತರು ಪ್ರತಿ ಬೂತ್ ಮಟ್ಟದಲ್ಲಿ ಈಗಿನಿಂದಲೇ ಚುನಾವಣೆ ಸಂಘಟನೆ ಮಾಡಬೇಕು ಜಿಲ್ಲಾ ಪಂಚಾಯತಿ ಹಾಗೂ ತಾಲೂಕಿನ ಪಂಚಾಯಿತಿ ಚುನಾವಣೆ ಬರುತ್ತದೆ. ಕಾರ್ಯಕರ್ತರು ಒಗ್ಗಾಟಾಗಿ ಕೆಲಸ ಮಾಡಬೇಕು.ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ನಾವೆಲ್ಲರೂ ಕೂಡ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.ಇದೇ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಮಹಾರುದ್ರಸ್ವಾಮಿ ,ಮುಖಂಡರಾದ ಶಿವನೇಹಳ್ಳಿ ಮಲ್ಲೇಶ್ ,ಜಯಣ್ಣ , ವಕೀಲ ನಂಜುಂಡಪ್ಪ , ಶಾಮೀಲ್ ನಟೇಶ್ ,ಮಂಜುನಾಥ್ ,ದೀಲೀಪ್ ಕುಮಾರ್ ,ವಿಶ್ವ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.