ಬಿಹಾರದಲ್ಲಿ ಬಿಜೆಪಿ ಗೆಲುವು: ಸೋಮವಾರಪೇಟೆಯಲ್ಲಿ ವಿಜಯೋತ್ಸವ

| Published : Nov 15 2025, 02:45 AM IST

ಸಾರಾಂಶ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಲಾಯಿತು.ಈ ಸಂದರ್ಭ ಮಾಜಿ ಎಂಎಲ್ಸಿ ಮೇದಪ್ಪ ಮಾತನಾಡಿ, ೨೦೦ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದು, ಕಾಂಗ್ರೆಸ್ ಮೈತ್ರಿಕೂಟಕ್ಕೆ ವಿರೋಧ ಪಕ್ಷದಲ್ಲೂ ಕೂಡ ಸ್ಥಾನ ದೊರೆತಿಲ್ಲ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಡಳಿತಕ್ಕೆ ಮತದಾರ ಮಣೆ ಹಾಕಿದ್ದಾರೆ. ಕರ್ನಾಟಕದಲ್ಲೂ ಕೂಡ ಇದೀಗ ಚುನಾವಣೆ ಘೋಷಣೆಯಾದರೆ ಬಿಜೆಪಿ ಭಾರಿ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದು ಹೇಳಿದರು. ವಿಜಯೋತ್ಸವದಲ್ಲಿ ಮಂಡಲ ಬಿಜೆಪಿ ಪ್ರಮುಖರಾದ ದರ್ಶನ್ ಜೋಯಪ್ಪ, ಮನುಕುಮಾರ್ ರೈ, ಬಿ.ಜೆ.ದೀಪಕ್, ಮಹೇಶ್ ತಿಮ್ಮಯ್ಯ, ಶರತ್ ಚಂದ್ರ, ಸೋಮೇಶ್, ಪ್ರಸನ್ನ ನಾಯರ್, ಕಿಬ್ಬೆಟ್ಟ ಮಧು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.