ಹರಿಯಾಣದಲ್ಲಿ ಬಿಜೆಪಿ ಜಯಭೇರಿ: ನಗರದಲ್ಲಿ ಬಿಜೆಪಿಯಿಂದ ವಿಜಯೋತ್ಸವ

| Published : Oct 09 2024, 01:42 AM IST

ಹರಿಯಾಣದಲ್ಲಿ ಬಿಜೆಪಿ ಜಯಭೇರಿ: ನಗರದಲ್ಲಿ ಬಿಜೆಪಿಯಿಂದ ವಿಜಯೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಹರಿಯಾಣದಲ್ಲಿ ಬಿಜೆಪಿ ಜಯಭೇರಿ ಹಿನ್ನೆಲೆಯಲ್ಲಿ ಚಾಮರಾಜನಗರದ ಜಿಲ್ಲಾ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಹರಿಯಾಣದಲ್ಲಿ ಬಿಜೆಪಿ ಜಯಭೇರಿ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಅವರ ನೇತೃತ್ವದಲ್ಲಿ ಜಮಾಯಿಸಿದ ಮುಖಂಡರು, ಕಾರ್ಯಕರ್ತರು ನಗರದ ಭುವನೇಶ್ವರಿ ವೃತ್ತಕ್ಕೆ ತೆರಳಿ ಪಟಾಕಿ, ಸಿಡಿಸಿ, ಸಿಹಿಹಂಚಿ ವಿಜಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದ ನೇತೃತ್ವದಲ್ಲಿ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಮಾತನಾಡಿ, ಹರಿಯಾಣದಲ್ಲಿ ಹ್ಯಾಟ್ರಿಕ್ ಗೆಲುವು, ಜಮ್ಮು ಕಾಶ್ಮೀರ ಉತ್ತಮ ಪ್ರದರ್ಶನ ನೀಡಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಂದ ಜಯವಾಗಿದ್ದು ಇದು ಕರ್ನಾಟಕದ ಮುಂದಿನ ಚುನಾವಣೆಯ ದಿಕ್ಸೂಚಿ ಎಂದರು.

ಈ ಸಂದರ್ಭದಲ್ಲಿ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ನಗರಸಭಾ ಅಧ್ಯಕ್ಷ ಎಸ್.ಸುರೇಶ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ವೃಷಬೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹಾದೇವಸ್ವಾಮಿ ,ಪ್ರಣಯ್, ಟಗರಪುರ ರೇವಣ್ಣ .ಸೋಮಣ್ಣ ಉಪ್ಪಾರ್, ಮಂಡಲ ಅಧ್ಯಕ್ಷರಾದ ಚನ್ನಂಜಯ್ಯನ ಹುಂಡಿ ಮಹದೇವ ಪ್ರಸಾದ್, ವೃಷಭೇಂದ್ರ ಸ್ವಾಮಿ, ಅನಿಲ್ ಜಿಲ್ಲಾ ಕಾರ್ಯದರ್ಶಿ ಪಿ.ಮಹೇಶ್, ಮುಖಂಡರಾದ ವೇಣುಗೋಪಾಲ್, ವೈ.ಡಿ. ಸೂರ್ಯನಾರಾಯಣ್, ಮಹೇಶ್, ಪಟೇಲ್ ಶಿವಕುಮಾರ್, ಮುರುಗೇಶ್ ಇತರರು ಹಾಜರಿದ್ದರು.