ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಿರುವಾಗಲೂ ಬಳ್ಳಾರಿ ಪಾದಯಾತ್ರೆ ನಡೆಸುವ ಅಗತ್ಯವೇನಿದೆ?. ಬಿಜೆಪಿಯವರು ಜನರ ಸಮಸ್ಯೆಗಳ ಬದಲು ರಾಜಕೀಯಕ್ಕೆ ಆದ್ಯತೆ ನೀಡುತ್ತಿದ್ದಾರೆ. ಹೀಗಾಗಿ ಬಿಜೆಪಿಯವರು ಜಾಬ್‌ಲೆಸ್ ಆಗಿದ್ದು, ಮಾಡಲು ಕೆಲಸವಿಲ್ಲದೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ವ್ಯಂಗ್ಯವಾಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸಮಸ್ಯೆಗಳ ಕುರಿತು ಚರ್ಚೆ ನಡೆಸಬೇಕಾದ ಸಂದರ್ಭದಲ್ಲಿ ಬಿಜೆಪಿ ರಾಜಕೀಯಕ್ಕೆ ಮುಂದಾಗಿದೆ. ಬಿ.ನಾಗೇಂದ್ರ ರಾಜೀನಾಮೆ ನೀಡಿದ ಬಳಿಕವೂ ಬಳ್ಳಾರಿ ಪಾದಯಾತ್ರೆ ನಡೆಸಲು ಹೊರಟಿರುವುದು ಬಿಜೆಪಿಯವರಿಗೆ ಯಾವುದೇ ಕೆಲಸವಿಲ್ಲ ಎಂಬುವುದನ್ನು ತೋರಿಸುತ್ತದೆ ಎಂದು ಟೀಕಿಸಿದರು.ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಬರಗಾಲ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಅಧಿವೇಶನ ನಡೆಯುತ್ತಿದೆ. ಆದರೆ, ಬಿಜೆಪಿ ಸದಸ್ಯರು ರಾಜಕೀಯ ವಿಚಾರಗಳನ್ನು ಮುಂದಿಟ್ಟುಕೊಂಡು ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ಅಧಿವೇಶನದ ಸಮಯವನ್ನು ವ್ಯರ್ಥ ಮಾಡಿದ್ದಾರೆ ಎಂದು ಆರೋಪಿಸಿದರು.ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆಯಬೇಕಿತ್ತು. ಆದರೆ, ವಿರೋಧ ಪಕ್ಷದ ವರ್ತನೆಯಿಂದ ಕಲಾಪಕ್ಕೆ ಅಡ್ಡಿಯಾಗಿದೆ. ಇದನ್ನು ರಾಜ್ಯದ ಜನತೆ ಗಮನಿಸುತ್ತಿದ್ದು, ಬಿಜೆಪಿಯನ್ನು ಕ್ಷಮಿಸುವುದಿಲ್ಲ.

-ಲಕ್ಷ್ಮೀ ಹೆಬ್ಬಾಳಕರ, ಮಾಜಿ ಸಚಿವೆ.