ವಿಧಾನ ಪರಿಷತ್ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ವಿಜಯಶಾಲಿಯಾದ ಹಿನ್ನೆಲೆಯಲ್ಲಿ ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಮಾಜಿ ಸಚಿವ ಹಾಲಪ್ಪ ಆಚಾರ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಯಲಬುರ್ಗಾ: ವಿಧಾನ ಪರಿಷತ್ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ವಿಜಯಶಾಲಿಯಾದ ಹಿನ್ನೆಲೆಯಲ್ಲಿ ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಮಾಜಿ ಸಚಿವ ಹಾಲಪ್ಪ ಆಚಾರ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿತ್ತು. ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿಕೊಂಡು, ಗೆಲುವಿನ ಸಂತಸವನ್ನು ವ್ಯಕ್ತಪಡಿಸಿದರು. ಈ ಮೂಲಕ ಚುನಾವಣೆಯ ಯಶಸ್ಸನ್ನು ಸಂಭ್ರಮದಿಂದ ಆಚರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಹಾಲಪ್ಪ ಆಚಾರ್, ವಿಧಾನಪರಿಷತ್ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಸಾಧಿಸಿರುವ ಗೆಲುವು ಸಂತಸ ತಂದಿದೆ. ಅಭ್ಯರ್ಥಿಗಳ ಗೆಲುವು ಮೈತ್ರಿಕೂಟದ ಮೇಲಿನ ವಿಶ್ವಾಸವನ್ನು ಪ್ರತಿಬಿಂಬಿಸಿದ್ದು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಪ್ರಯತ್ನಕ್ಕೆ ದೊರೆತ ಯಶಸ್ಸಾಗಿದೆ ಎಂದು ಹೇಳಿದರು.
ವಿಜಯೋತ್ಸವದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಮಾರುತಿ ಗಾವರಾಳ, ಪ್ರಧಾನ ಕಾರ್ಯದರ್ಶಿ ಅಮರೇಶ ಹುಬ್ಬಳ್ಳಿ, ಮುಖಂಡರಾದ ಈರಣ್ಣ ಹುಬ್ಬಳ್ಳಿ, ಬಸಲಿಂಗಪ್ಪ ಭೂತೆ, ಸಿ.ಎಚ್. ಪಾಟೀಲ್, ಗೌರಾ ಬಸವರಾಜ ರಾಜೂರು, ಶಿವಕುಮಾರ ನಾಗಲಪುರಮಠ, ಬಸವರಾಜ ಗುಳಗುಳಿ, ಕಲ್ಲೇಶಪ್ಪ ಕರಮುಡಿ, ಸಂತೋಷಿಮಾ ಜೋಶಿ, ವಸಂತ ಬಾವಿಮನಿ, ಅಂದಯ್ಯ ಕಳ್ಳಿಮಠ, ಅಶೋಕ ಅರಕೇರಿ, ಕಳಕಪ್ಪ ತಳವಾರ್, ದೊಡ್ಡಯ್ಯ ಗುರುವಿನ್, ಶರಣಪ್ಪ ರಾಂಪುರ, ಸಂಗಪ್ಪ ರಾಮತಾಳ, ಸಿದ್ರಾಮೇಶ ಬೆಲೇರಿ, ಡಿ.ಕೆ. ಪರಶುರಾಮ ಚಲವಾದಿ, ಬಾಪುಗೌಡ ಪಾಟೀಲ್, ಗೌತಮ ಜೋಶಿ, ಮೇಘರಾಜ ಹುಬ್ಬಳ್ಳಿ, ಬಸವರಾಜ ಬಾವಿಮನಿ, ರಮೇಶ ಬಣಕಾರ, ನೀಲಪ್ಪ ಹಳ್ಳಿಕೇರಿ, ಮಲ್ಲಪ್ಪ ಸುರಕೋಡ, ಕಳಕನಗೌಡ ನಾಗನಗೌಡ, ಸುರೇಶ ಹೊಸಳ್ಳಿ, ಕಲ್ಲಪ್ಪ ತೊಂಡಿಹಾಳ, ಶರಣಯ್ಯ ಹಿರೇಮಠ ಉಪಸ್ಥಿತರಿದ್ದರು.