ಶ್ರೀರಾಮನಿಗೆ ಹಾಲಿನ ಅಭಿಷೇಕ ಮಾಡಿ ಕಾರ್ಯಕಾರಿಣಿಗೆ ಚಾಲನೆ

| Published : Jan 29 2024, 01:34 AM IST

ಶ್ರೀರಾಮನಿಗೆ ಹಾಲಿನ ಅಭಿಷೇಕ ಮಾಡಿ ಕಾರ್ಯಕಾರಿಣಿಗೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಶ್ರೀರಾಮನಿಗೆ ಹಾಲಿನ ಅಭಿಷೇಕ ಮಾಡುವ ಮೂಲಕ ನಗರದ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಚಾಲನೆ ನೀಡಲಾಯಿತು. ಶಾಸಕ ಬಿ.ವೈ.ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆಯ ಉದ್ಘಾಟನೆಯನ್ನು ರಾಮನ ಪ್ರತಿಮೆಗೆ ಹಾಲಿನ ಅಭಿಷೇಕದ ಮೂಲಕ ಉದ್ಘಾಟನೆ ಮಾಡಲಾಯಿತು. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್‌, ಪ್ರಹ್ಲಾದ್‌ ಜೋಶಿ, ರಾಜೀವ್‌ ಚಂದ್ರಶೇಖರ್‌, ಭಗವಂತ ಖೂಬಾ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಜಗದೀಶ್‌ ಶೆಟ್ಟರ್, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಇತರರು ಭಾಗಿಯಾಗಿದ್ದರು. ಹಾಲಿನ ಅಭಿಷೇಕ ಮಾಡುವ ವೇಳೆ ಜೈಶ್ರೀರಾಮ್‌ ಘೋಷಣೆ ಮೊಳಗಿತು. ಬಳಿಕ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ಸಮರ್ಪಣೆ ಮಾಡಲಾಯಿತು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಕುರಿತ ಕೃತಿ ಬಿಡುಗಡೆ ಮಾಡಲಾಯಿತು.