ಸಾರಾಂಶ
ಸಂವಿಧಾನ ಬದಲಾವಣೆ ಮಾಡುವ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ ನೀಡಿರುವ ಹೇಳಿಕೆ ಖಂಡಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ: ಸಂವಿಧಾನ ಬದಲಾವಣೆ ಮಾಡುವ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ ನೀಡಿರುವ ಹೇಳಿಕೆ ಖಂಡಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಇಲ್ಲಿನ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ಸೇರಿದ ಕಾರ್ಯಕರ್ತರು, ಡಿ.ಕೆ. ಶಿವಕುಮಾರ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಬಾಯಿ ಬಡಿದುಕೊಂಡು ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು, ಡಿಕೆಶಿ ಪ್ರತಿಕೃತಿಗೆ ಬೆಂಕಿ ಹಚ್ಚಿದರು.ಈ ವೇಳೆ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ಡಿಸಿಎಂ ಡಿ.ಕೆ. ಶಿವಕುಮಾರ ಅವರ ಹೇಳಿಕೆ ಅತ್ಯಂತ ಖಂಡನೀಯ. ಡಿ.ಕೆ. ಶಿವಕುಮಾರ ಹೇಳಿಕೆ ಖಂಡಿಸಿ ನಮ್ಮ ಎಲ್ಲ ಮಂಡಲಗಳಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸುತ್ತಿದ್ದೇವೆ.
ಅವರ ಹೇಳಿಕೆ ಕುರಿತು ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು. ಡಿ.ಕೆ. ಶಿವಕುಮಾರ ಕೂಡಲೇ ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಾರ್ವಜನಿಕರ ಕ್ಷಮೆಯಾಚಿಸಬೇಕು. ಅವರ ಪಕ್ಷದ ಮುಖಂಡ ರಾಹುಲ್ ಗಾಂಧಿ ಈ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.ಕಾಂಗ್ರೆಸ್‌ಗೆ ಮೊದಲಿನಿಂದಲೂ ಅಂಬೇಡ್ಕರ್ ಹಾಗೂ ಸಂವಿಧಾನದ ಮೇಲೆ ಗೌರವವೇ ಇಲ್ಲ. ಅದು ಇದೀಗ ಡಿಸಿಎಂ ಡಿ.ಕೆ. ಶಿವಕುಮಾರ ಹೇಳಿಕೆಯಿಂದ ಮತ್ತೊಮ್ಮೆ ಸಾಬೀತಾಗಿದೆ ಎಂದರು.
ಪ್ರತಿಕೃತಿ ದಹನದ ಬಳಿಕ ಪೊಲೀಸರು ಆಗಮಿಸಿ ನೀರು ಎರೆಚಿ ಬೆಂಕಿ ನಂದಿಸಿದರು. ಈ ವೇಳೆ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ದತ್ತಮೂರ್ತಿ ಕುಲಕರ್ಣಿ, ರಾಜಣ್ಣ ಕೊರವಿ ಸೇರಿದಂತೆ ಹಲವರಿದ್ದರು.ಫೋಟೋ: 25ಎಚ್‌ಯುಬಿ1: ಪ್ರತಿಕೃತಿ ದಹನ25ಎಚ್‌ಯುಬಿ2: ಬೆಂಕಿಯನ್ನು ಪೊಲೀಸರು ನಂದಿಸಿದರು.