ಸಾರಾಂಶ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ನಿಟ್ಟೂರಿನಲ್ಲಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪ್ರತಿಭಟನೆ ನಡೆಸಿದರು.
ಗುಬ್ಬಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ನಿಟ್ಟೂರಿನಲ್ಲಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪ್ರತಿಭಟನೆ ನಡೆಸಿದರು.
ಜೆ.ಸಿ.ಮಾಧುಸ್ವಾಮಿಯವರು ಹೋರಾಟ ಮಾಡಿ ತುಮಕೂರು ಜಿಲ್ಲೆಗೆ ನೀರು ಹರಿಸಲು ಕಾರಣರಾಗಿದ್ದಾರೆ. ಅವರಿಗೆ ಟಿಕೆಟ್ ನೀಡದೆ ಹೋದರೆ ಜಿಲ್ಲೆಯಲ್ಲಿ ಬಿಜೆಪಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತದೆ ಎಂಬುದನ್ನು ರಾಜ್ಯ ನಾಯಕರು ಅರ್ಥ ಮಾಡಿಕೊಳ್ಳಬೇಕು. ಸ್ಥಳೀಯರಿಗೆ ಟಿಕೆಟ್ ನೀಡುವ ಮೂಲಕ ಜಿಲ್ಲೆಯಲ್ಲಿ ಬಿಜೆಪಿಯನ್ನು ಭದ್ರಗೊಳಿಸಬೇಕು. ವಲಸಿಗರಿಗೆ ಟಿಕೆಟ್ ನೀಡಿದರೆ ಜಿಲ್ಲೆಯಲ್ಲಿ ಬಿಜೆಪಿ ಚಿದ್ರಗೊಳ್ಳಲಿದೆ ಎಂದರು.ಯಾರದೋ ಒಬ್ಬರ ಹಿತಾಸಕ್ತಿಗಾಗಿ ಬಿಜೆಪಿ ಬಲಿಕೊಡುತ್ತಿರುವ ನಾಯಕರಿಗೆ ಬುದ್ಧಿ ಕಲಿಸಬೇಕಾಗುತ್ತದೆ ಎಂದರು. ಗೋ ಬ್ಯಾಕ್ ಸೋಮಣ್ಣ ಎಂದು ಕೂಗುವ ಮೂಲಕ ತುಮಕೂರು ಲೋಕಸಭಾ ಚುನಾವಣೆಯಲ್ಲಿ ವಿ.ಸೋಮಣ್ಣರಿಗೆ ಟಿಕೆಟ್ ನೀಡಿದರೆ ಸೋಲಿನ ರುಚಿ ತೋರಿಸಲಾಗುತ್ತದೆ ಎಂದರು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಕಿಡಿಗಾಣಪ್ಪ, ಯೋಗೀಶ್, ಕಾರೇಕುರ್ಚಿ ಸತೀಶ್, ಮಾರಶೆಟ್ಟಿಹಳ್ಳಿ ನಟರಾಜ್, ಗಿರೀಶ್ ಸೇರಿದಂತೆ ಮಾಧುಸ್ವಾಮಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.