ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

| Published : Jan 18 2025, 12:47 AM IST

ಸಾರಾಂಶ

ಕಾಂಗ್ರೆಸ್ ಈ ದೇಶಕ್ಕೆ ಕ್ಯಾನ್ಸರ್ ಇದ್ದಂತೆ. ಆರ್.ಎಸ್.ಎಸ್ ಮತ್ತು ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ರಾಹುಲ್ ಗಾಂಧಿ ಅವರಿಗಿಲ್ಲ. ಇಂತಹ ಹೇಳಿಕೆ ನೀಡಿರುವ ರಾಹುಲ್‌ಗಾಂಧಿ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ್ರೋಹಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್‍ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಸೇರಿದ ಕಾರ್‍ಯಕರ್ತರು, ರಾಹುಲ್‌ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. ಬಳಿಕ ರಾಹುಲ್‌ಗಾಂಧಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ಉದ್ಘಾಟನೆ ವೇಳೆ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರ್.ಎಸ್.ಎಸ್ ಮತ್ತು ಬಿಜೆಪಿ ಬಗ್ಗೆ ದೇಶದ್ರೋಹಿ ಹೇಳಿಕೆ ನೀಡಿರುವುದನ್ನು ಖಂಡಿಸಿದರು.

ಭಾರತ ವಿರೋಧಿ ನಿಲುವು ಕಾಂಗ್ರೆಸ್ ರಕ್ತದಲ್ಲಿದೆ. ಬ್ರಿಟಿಷರಿಂದ ಸ್ಥಾಪಿಸಲ್ಪಟ್ಟ ಕಾಂಗ್ರೆಸ್ ಪಕ್ಷ ನೆಹರೂ ಕಾಲದಿಂದ ಹಿಡಿದು ಇಂದಿನ ರಾಹುಲ್ ಕಾಲದವರೆಗೂ ಪರಕೀಯರ ಪರವಾಗಿಯೇ ಇದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಈ ದೇಶಕ್ಕೆ ಕ್ಯಾನ್ಸರ್ ಇದ್ದಂತೆ. ಆರ್.ಎಸ್.ಎಸ್ ಮತ್ತು ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ರಾಹುಲ್ ಗಾಂಧಿ ಅವರಿಗಿಲ್ಲ. ಇಂತಹ ಹೇಳಿಕೆ ನೀಡಿರುವ ರಾಹುಲ್‌ಗಾಂಧಿ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎಂ.ರಘುಗೌಡ, ಪ್ರಧಾನ ಕಾರ್ಯದರ್ಶಿ ಪ್ರದೀಪ್, ಸವ್ಯಸಾಚಿ, ನಾಗಮಂಗಲ ಆನಂದ್, ಪ್ರೀತಮ್, ಅಪ್ಪು, ವರದರಾಜು, ಸುರೇಶ, ನವೀನ, ಪ್ರೇಮ, ನಿತಿನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.