ಪ್ರಿಯಾಂಕ್ ಖರ್ಗೆ ರಾಜಿನಾಮೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

| Published : Jan 04 2025, 12:32 AM IST

ಪ್ರಿಯಾಂಕ್ ಖರ್ಗೆ ರಾಜಿನಾಮೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾಡಿನ ಜನರಿಗಷ್ಟೆ ಅಲ್ಲ, ಗುತ್ತಿಗೆದಾರರಿಗೆ, ನಿಷ್ಟಾವಂತ ಸರ್ಕಾರಿ ಅಧಿಕಾರಿಗಳಿಗೂ ನೆಮ್ಮದಿ ಇಲ್ಲ. ಆತ್ಮಹತ್ಯೆಯೇ ಅವರ ಪಾಲಿನ ಗ್ಯಾರಂಟಿಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಗುತ್ತಿಗೆದಾರ ಸಚಿನ್‌ ಪಾಂಚಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ್‌ ಖರ್ಗೆ ರಾಜಿನಾಮೆಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಶುಕ್ರವಾರ ಪ್ರತಿಭಟನೆ ಹಾಗೂ ಪೋಸ್ಟರ್‌ ಅಭಿಯಾನ ನಡೆಯಿತು.

ನಗರದ ಕ್ಲಾಕ್‌ಟವರ್‌ ಎದುರು ನಡೆದ ಪ್ರತಿಭಟನೆಯಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್‌ ಮಲ್ಯ ಮತ್ತಿತರರು ಪ್ರತಿಭಟನಾ ಸಭೆ ನಡೆಸಿ ರಸ್ತೆ ತಡೆ ನಡೆಸಲು ಮುಂದಾದರು, ಆಗ ಪೊಲೀಸರು ಪ್ರತಿಭಟನಾನಿರತರನ್ನು ಬಂಧಿಸಿ ಕರೆದೊಯ್ದರು.

ಪ್ರತಿಭಟನಾಕಾರರು ಸೊಸೈಡ್‌ ಮತ್ತು ಸುಪಾರಿ ಸರ್ಕಾರ, ಸುಪಾರಿ ಸ್ಪಾನ್ಸರ್‌ ಖರ್ಗೆ ಎಂದು ಪೋಸ್ಟರ್‌ ಹಿಡಿದು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ಸರ್ಕಾರದ್ದು ಆತ್ಮಹತ್ಯೆ ಗ್ಯಾರಂಟಿ: ರಾಜ್ಯದಲ್ಲಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾಡಿನ ಜನರಿಗಷ್ಟೆ ಅಲ್ಲ, ಗುತ್ತಿಗೆದಾರರಿಗೆ, ನಿಷ್ಟಾವಂತ ಸರ್ಕಾರಿ ಅಧಿಕಾರಿಗಳಿಗೂ ನೆಮ್ಮದಿ ಇಲ್ಲ. ಆತ್ಮಹತ್ಯೆಯೇ ಅವರ ಪಾಲಿನ ಗ್ಯಾರಂಟಿಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ರಮೇಶ್ ಕಂಡೆಟ್ಟು, ಪ್ರೇಮಾನಂದ ಶೆಟ್ಟಿ, ವಿಕಾಸ್ ಪುತ್ತೂರು, ನಂದನ್ ಮಲ್ಯ, ಮೋನಪ್ಪ ಭಂಡಾರಿ, ಪೂಜಾ ಪೈ, ಉಪಮೇಯರ್ ಭಾನುಮತಿ, ಸಂಜಯ್ ಪ್ರಭು, ಸೇರಿದಂತೆ ಪಾಲಿಕೆ ಸದಸ್ಯರು, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಇದ್ದರು.