ಕೇಂದ್ರದ ತಪ್ಪುಗಳನ್ನು ಮರೆಮಾಚಲು ಬಿಜೆಪಿ ಜನಾಕ್ರೋಶ ಯಾತ್ರೆ: ಹರ್ಷಿತ್ ಗೌಡ

| Published : Apr 13 2025, 02:06 AM IST

ಕೇಂದ್ರದ ತಪ್ಪುಗಳನ್ನು ಮರೆಮಾಚಲು ಬಿಜೆಪಿ ಜನಾಕ್ರೋಶ ಯಾತ್ರೆ: ಹರ್ಷಿತ್ ಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಶಿವಮೊಗ್ಗ: ಜನಾಕ್ರೋಶ ಯಾತ್ರೆ ವಿರುದ್ಧ ಪ್ರತಿಭಟನೆ ನಡೆಸಿದ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು.

ಶಿವಮೊಗ್ಗ: ಜನಾಕ್ರೋಶ ಯಾತ್ರೆ ವಿರುದ್ಧ ಪ್ರತಿಭಟನೆ ನಡೆಸಿದ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು.ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಗೋಪಿ ವೃತ್ತದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇದನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು 57ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಹರ್ಷಿತ್ ಗೌಡ, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಜೀವನದ ಮೇಲೆ ಗದಾಪ್ರಹಾರ ಮಾಡುತ್ತಿರುವ ಬಿಜೆಪಿಗೆ ಜನಾಕ್ರೋಶ ಯಾತ್ರೆ ಮಾಡುವ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ನೈತಿಕತೆ ಇಲ್ಲ. ಬಿಜೆಪಿಯ ಜನಾಕ್ರೋಶ ಯಾತ್ರೆಯನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ದುಬಾರಿಯಾಗಿದ್ದಾಗ ಯುಪಿಎ ಸರ್ಕಾರ ಕೇವಲ 63 ರುಪಾಯಿಗೆ ಪೆಟ್ರೋಲ್ ಮಾರಾಟಾಡುತ್ತಿತ್ತು. ಕಚ್ಚಾ ತೈಲದ ಬೆಲೆ ಕಡಿಮೆಯಾಗಿದ್ದರೂ, ಬಿಜೆಪಿ 103 ರು.ಗೆ ಲೀಟರ್ ಪೆಟ್ರೋಲ್ ಮಾರಾಟ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯೇ ಕಾರಣ ಎಂದು ದೂರಿದರು.

ಕೇಂದ್ರ ಸರ್ಕಾರದ ನೀತಿಗಳಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಕೇಂದ್ರ ಸರ್ಕಾರದ ತಪ್ಪುಗಳನ್ನು ಮರೆಮಾಚಲು ಬಿಜೆಪಿ ಜನಾಕ್ರೋಶ ಯಾತ್ರೆಯ ನಾಟಕವಾಡುತ್ತಿದೆ.ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಈಡೇರಿಸಿ ಜನಸಾಮಾನ್ಯರ ಮನ ಗೆದ್ದಿದೆ. ಇದನ್ನು ಸಹಿಸಲಾಗದೇ ಬಿಜೆಪಿ ಜನಾಕ್ರೋಶದ ನಾಟಕವಾಡುತ್ತಿದ್ದು, ಇದನ್ನು ಜಿಲ್ಲಾ ಯುವ ಕಾಂಗ್ರೆಸ್ ಖಂಡಿಸುತ್ತದೆ ಎಂದರು.

ಕಾಂಗ್ರೆಸ್ ವಕ್ತರರಾದ ರಮೇಶ್ ಹೆಗಡೆ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್.ಅಶೋಕ್ ಜನಾಕ್ರೋಶ ಯಾತ್ರೆ ಕೈಬಿಟ್ಟು ತನ್ನದೇ ಪಕ್ಷ ಕೇಂದ್ರದಲ್ಲಿ ಅಧಿಕಾರದಲ್ಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವೊಲಿಸಿ ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ವಿಧಾನಸಭೆ ಅಧ್ಯಕ್ಷ ಚರಣ್, ಪ್ರವೀಣ್, ಸಾಕ್ಲಿನ್, ಗಿರೀಶ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ್, ಆಕಾಶ್ ಯುವ ಮುಖಂಡರಾದ ಮಧುಸೂಧನ, ಅಕ್ಬರ್, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಟಿಕೆರೆ, ಜೀವನ್, ಚಂದ್ರೋಜಿ ರಾವ್, ಕಾರ್ತಿಕ್, ಸುಭಾನ್, ರವಿ, ಗೌತಮ್, ಅಭಿ, ಮೋಹನ್, ಅನಂತ ಬೊಮ್ಮನಕಟ್ಟೆ, ನಿಖಿಲ್, ವಿಷ್ಣು, ಲಿಂಗರಾಜ, ನರಸಿಂಹ ಇದ್ದರು