ಬಿ.ಕೆ. ಹರಿಪ್ರಸಾದ್ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿಗೆ ಮರಿಸ್ವಾಮಿ ಆಹ್ವಾನ । ಪೂರ್ವಸಿದ್ಧತಾ ಸಭೆ
---ಕನ್ನಡಪ್ರಭ ವಾರ್ತೆ ಚಾಮರಾಜನಗರ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭ ಜೂ.೨೧ರಂದು ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ನಡೆಯಲಿದ್ದು, ಜಿಲ್ಲೆಯ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ. ಮರಿಸ್ವಾಮಿ ಮನವಿ ಮಾಡಿದರು.ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆದ ಜಿಲ್ಲೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಯುವಘಟಕ, ಮುಂಚೂಣಿ ಘಟಕದ ವತಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಿ.ಕೆ. ಶಿವಕುಮಾರ್ ಕಳೆದ ೬ ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾಗಿದ್ದಾರೆ. ಸಿದ್ದರಾಮಯ್ಯ ಅವರು ೮ ವರ್ಷ ಕಾಲ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಕಳೆದ ಜೂ.೩ರಂದು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದು, ಜೂ.೨೧ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರಿಸುವರು. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ರಾಜ್ಯಮುಖಂಡರು ಭಾಗವಹಿಸುವರು ಎಂದರು.
ಜಿಲ್ಲೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಯುವ ಘಟಕ, ಮುಂಚೂಣಿ ಘಟಕದ ಪದಾಧಿಕಾರಿಗಳು, ಜಿಲ್ಲೆಯಿಂದ ಹೆಚ್ಚಿನ ಜನರನ್ನು ಬೆಂಗಳೂರಿನ ಪದಗ್ರಹಣ ಸಮಾರಂಭಕ್ಕೆ ಕರೆದುಕೊಂಡು ಬಂದು ಸಮಾರಂಭ ಯಶಸ್ವಿಗೊಳಿಸಿಕೊಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ನಾಗರತ್ನ, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ, ಕೆಪಿಸಿಸಿ ಕಾನೂನು ವಿಭಾಗದ ಕಾರ್ಯದರ್ಶಿ ವಕೀಲ ಚಿನ್ನಸ್ವಾಮಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕ ಮಹದೇವ್, ಆರ್. ಮಹದೇವ್, ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಶಿವಕುಮಾರ್, ಜಿಪಂ ಮಾಜಿ ಸದಸ್ಯರಾದ ಸದಾಶಿವ ಮೂರ್ತಿ, ಕೊಪ್ಪಾಳಿ ಮಹದೇವನಾಯಕ, ರಮೇಶ್, ಕಾವೇರಿ ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್. ಗುರುಸ್ವಾಮಿ, ಕೊಳ್ಳೇಗಾಲ ಘಟಕದ ತೋಟೇಶ್, ಮುಕುಂದ ವರ್ಮ, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಬಸವರಾಜು, ತಾಲ್ಲೂಕು ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಮರಿಯಾಲದ ಹುಂಡಿ ಕುಮಾರ್, ಮಲ್ಲಿಕಾರ್ಜುನ್, ಕುಮಾರಸ್ವಾಮಿ, ನಗರಸಭಾ ನಗರಸಭಾ ಮಾಜಿ ಅಧ್ಯಕ್ಷೆ ಚಿನ್ನಮ್ಮ, ಸದಸ್ಯರಾದ ಕಲಾವತಿ, ನಾಗರಾಜು, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಯೋಗೇಂದ್ರ ಸವಕೀಲ ನಾಗಾರ್ಜುನ್ ಪೃಥಿ, ಅರುಣ್‌ಕುಮಾರ್, ರಾಜೇಂದ್ರ ಪ್ರಸಾದ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಧುಸೂಧನ್, ತಾಪಂ ಮಾಜಿ ಸದಸ್ಯ ಪುಟ್ಟಸ್ವಾಮಿ, ಎಎಚ್. ನಸ್ರುಲ್ಲಾಖಾನ್, ಆಯಿಭ್ ಖಾನ್, ನಾಗಯ್ಯನಾಗವಳ್ಳಿ, ನಾಯಜ್, ಗ್ರಾಪಂ ಮಾಜಿ ಅಧ್ಯಕ್ಷ ರೂಪೇಶ್, ವೀರಭದ್ರಸ್ವಾಮಿ, ಅಪ್ಸರ್ ಅಹಮದ್, ರವಿ ಗೌಡ, ಸೈಯದ್ ಇರ್ಷದ್, ರಾಮಸಮುದ್ರ ನಾಗರಾಜು, ಸೇರಿದಂತೆ ಕಾರ್ಯಕರ್ತರು, ಮುಖಂಡರು ಹಾಜರಿದ್ದರು.---
18ಸಿಎಚ್ಎನ್14ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಮಾತನಾಡಿದರು.