ತುರ್ತು ಪರಿಸ್ಥಿತಿ ಹೆರಿಕೆ ವಿರೋಧಿಸಿ ಕರಾಳ ದಿನಾಚರಣೆ

| Published : Jun 25 2024, 12:30 AM IST

ತುರ್ತು ಪರಿಸ್ಥಿತಿ ಹೆರಿಕೆ ವಿರೋಧಿಸಿ ಕರಾಳ ದಿನಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಹೆರಿಕೆ ವಿರೋಧಿಸಿ ಸೋಮವಾರ ನಗರದಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರು ಕರಾಳ ದಿನಾಚರಣೆ ಆಚರಿಸಿದರು. ನಗರದ ಪ್ರವಾಸಿ ಮಂದಿರದಿಂದ ಕಾಂಗ್ರೆಸ್ ಭವನದತ್ತ ಬಿಜೆಪಿ ಮಹಾನಗರ ಮತ್ತು ಗ್ರಾಮೀಣ ಘಟಕದ ಕಾರ್ಯಕರ್ತರು ರ್‍ಯಾಲಿ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಶಾಸಕ ಅಭಯ ಪಾಟೀಲ ಮಾತನಾಡಿ, ತಮ್ಮ ಸ್ವಾರ್ಥಕ್ಕಾಗಿ ಕೋರ್ಟ್ ಆದೇಶ ಧಿಕ್ಕರಿಸಿ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್, ಇಂದು ಸಂವಿಧಾನದ ಬಗ್ಗೆ ಬುದ್ಧಿ ಹೇಳುತ್ತಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಹೆರಿಕೆ ವಿರೋಧಿಸಿ ಸೋಮವಾರ ನಗರದಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರು ಕರಾಳ ದಿನಾಚರಣೆ ಆಚರಿಸಿದರು. ನಗರದ ಪ್ರವಾಸಿ ಮಂದಿರದಿಂದ ಕಾಂಗ್ರೆಸ್ ಭವನದತ್ತ ಬಿಜೆಪಿ ಮಹಾನಗರ ಮತ್ತು ಗ್ರಾಮೀಣ ಘಟಕದ ಕಾರ್ಯಕರ್ತರು ರ್‍ಯಾಲಿ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಶಾಸಕ ಅಭಯ ಪಾಟೀಲ ಮಾತನಾಡಿ, ತಮ್ಮ ಸ್ವಾರ್ಥಕ್ಕಾಗಿ ಕೋರ್ಟ್ ಆದೇಶ ಧಿಕ್ಕರಿಸಿ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್, ಇಂದು ಸಂವಿಧಾನದ ಬಗ್ಗೆ ಬುದ್ಧಿ ಹೇಳುತ್ತಿದೆ. ಸಂವಿಧಾನದ ನಿಯಮವನ್ನು ಗಾಳಿಗೆ ತೂರಿ 1.40 ಲಕ್ಷ ಜನರನ್ನು ಜೈಲಿಗಟ್ಟಿ, ಸಾವಿರಾರು ಜನರನ್ನು ಕಗ್ಗೊಲೆ ಮಾಡಿದ ಹಿಟ್ಲರ್ ಶಾಹಿ ಕಾಂಗ್ರೆಸ್ ಸರ್ಕಾರ. ತುರ್ತು ಪರಿಸ್ಥಿತಿ ಹೇರಿದ್ದಕ್ಕೆ ಮೊದಲು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಕೇಳಲಿ. ಆಮೇಲೆ ಸಂವಿಧಾನ ಉಳಿಸುವ ಬಗ್ಗೆ ಮಾತನಾಡಲಿ. ಇನ್ನು ಈ ಹಿಂದೆ ತುರ್ತು ಪರಿಸ್ಥಿತಿ ವಿರೋಧಿಸಿದ್ದ ಸಿಎಂ ಸಿದ್ದರಾಮಯ್ಯ ಈ ವಿಚಾರದಲ್ಲಿ ಈಗ ಮೌನಿ ಬಾಬಾ ಆಗಿದ್ದಾರೆ. 15 ವರ್ಷಗಳ ಹಿಂದಿದ್ದ ಸಿದ್ದರಾಮಯ್ಯ ಈಗಿಲ್ಲ. ಅವರೀಗ ಕಾಂಗ್ರೆಸ್ ಸಿದ್ದರಾಮಯ್ಯ. ತುರ್ತು ಪರಿಸ್ಥಿತಿ ಹೇರಿದ್ದನ್ನು ಈಗ ಅವರು ಖಂಡಿಸಿದರೆ, ನಾನು ಸೆಲ್ಯೂಟ್ ಹೊಡೆಯುತ್ತೇನೆ ಎಂದರು.ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅನಿಲ ಬೆನಕೆ ಮಾತನಾಡಿ, ಬಿಜೆಪಿ ಸಂವಿಧಾನ ಬದಲಿಸುತ್ತದೆ ಎಂದು ಕಾಂಗ್ರೆಸ್ ನವರು ಆರೋಪಿಸುತ್ತಾರೆ. ಆದರೆ, ತುರ್ತು ಪರಿಸ್ಥಿತಿ ಹೇರಿ ದೇಶದಲ್ಲಿ ಕೆಟ್ಟ ಪರಿಸ್ಥಿತಿ ನಿರ್ಮಿಸಿದ್ದು ಕಾಂಗ್ರೆಸ್. ಕೂಡಲೇ ಎಲ್ಲ ಕಾಂಗ್ರೆಸ್ ನಾಯಕರು ದೇಶದ ಜನರ ಕ್ಷಮೆ ಕೇಳುವಂತೆ ಒತ್ತಾಯಿಸಿದರು.

ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಪೊಲೀಸರು ತಡೆದರು. ಈ ವೇಳೆ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ನೂಕಾಟ, ತಳ್ಳಾಟ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದು, ವಾಹನದಲ್ಲಿ ಹತ್ತಿಸಿದರು. ತೀವ್ರ ಪ್ರತಿರೋಧ ವ್ಯಕ್ತಪಡಿಸಿದ ಅಭಯ್ ಪಾಟೀಲರನ್ನು ಪೊಲೀಸರು ಎತ್ತಿಕೊಂಡು ಪೊಲೀಸ್ ವಾಹನದಲ್ಲಿ ಹಾಕಿದರು. ನಂತರ ಎಲ್ಲರನ್ನು ಬಿಡುಗಡೆಗೊಳಿಸಿದರು.

ಪ್ರತಿಭಟನೆಯಲ್ಲಿ ಶಾಸಕ ವಿಠ್ಠಲ ಹಲಗೇಕರ, ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡರ, ಸಂಜಯ ಪಾಟೀಲ, ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷೆ ಸುಭಾಷ ಪಾಟೀಲ, ಮಹಾನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಮುಖಂಡರಾದ ಮುರುಘೇಂದ್ರಗೌಡ ಪಾಟೀಲ, ಹಣಮಂತ ಕೊಂಗಾಲಿ ಸೇರಿ ಮತ್ತಿತರರು ಇದ್ದರು.