ಸಾರಾಂಶ
ಸೂರು ಇಲ್ಲದವರು ಸಾಕಷ್ಟು ಕುಟುಂಬಗಳಿವೆ. ಎಲ್ಲ ಕುಟುಂಬಗಳಿಗೆ ಸೂರು ಕಲ್ಪಿಸುವುದು ನನ್ನ ಗುರಿ. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಯೋಜನೆ ಸಿದ್ಧಪಡಿಸಿ ಸೂರು ಕಲ್ಪಿಸುವ ಕೆಲಸ ಮಾಡಲಾಗುವುದು.
ಹುಬ್ಬಳ್ಳಿ:
ಹುಬ್ಬಳ್ಳಿ-ಧಾರವಾಡ ಮಹಾನಗರದ ನಿವೇಶನ ರಹಿತ ಕುಟುಂಬಗಳಿಗೆ ಸೂರು ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ನಗರದ ನಿವೇಶನ ರಹಿತ ಕುಟುಂಬಗಳ ಸಭೆ ನಡೆಸಿ ಅವರು ಮಾತನಾಡಿದರು.ಸೂರು ಇಲ್ಲದವರು ಸಾಕಷ್ಟು ಕುಟುಂಬಗಳಿವೆ. ಎಲ್ಲ ಕುಟುಂಬಗಳಿಗೆ ಸೂರು ಕಲ್ಪಿಸುವುದು ನನ್ನ ಗುರಿ. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಯೋಜನೆ ಸಿದ್ಧಪಡಿಸಿ ಸೂರು ಕಲ್ಪಿಸುವ ಕೆಲಸ ಮಾಡಲಾಗುವುದು. ಬಡವರಿಗೆ ನೆಮ್ಮದಿಯ ಜೀವನ ನೀಡುವುದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಆದ ಕಾರಣ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಮಾತನಾಡಿ, ನಿಮ್ಮ ಮನೆಯ ಮಗನಂತೆ ಕೆಲಸ ಮಾಡಿ ತೋರಿಸುತ್ತೇನೆ. ಈ ಸಲ ತಮಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.ಬಿಜೆಪಿ ಬರೀ ಸುಳ್ಳು ಹೇಳುತ್ತಾ ಜನರ ಹಾದಿ ತಪ್ಪಿಸುವ ಕೆಲಸ ಮಾಡಿದರೆ, ಕಾಂಗ್ರೆಸ್ ನುಡಿದಂತೆ ನಡೆದು ತೋರಿಸುವ ಪಕ್ಷ. ಇದಕ್ಕೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿಗಳೇ ಸಾಕ್ಷಿ. ಗ್ಯಾರಂಟಿ ಯೋಜನೆಗಳಿಂದ ಬಡ ಜನರು ನೆಮ್ಮದಿ ಬದುಕು ನಡೆಸುವಂತಾಗಿದೆ. ಈ ಸಲ ಒಂದು ಅವಕಾಶ ಕೊಟ್ಟು ನೋಡಿ ನಿಮ್ಮ ಧ್ವನಿಯಾಗಿ ಕೆಲಸ ಮಾಡಿ ತೋರಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ಅನೀಲಕುಮಾರ ಪಾಟೀಲ, ಮುಖಂಡರಾದ ಬಸವರಾಜ ಗುರಿಕಾರ, ಕವಿತಾ ರೆಡ್ಡಿ, ನಾಗರಾಜ ಗುರಿಕಾರ ಸೇರಿದಂತೆ ಪಕ್ಷದ ಸಮಸ್ತ ಕಾರ್ಯಕರ್ತರು, ಸಮಿತಿಯ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.