ರಕ್ತದಾನ, ನೇತ್ರದಾನ ಶ್ರೇಷ್ಠ: ಪಿಡಿಒ ಜಯಲಕ್ಷ್ಮಿ

| Published : Jul 21 2024, 01:24 AM IST

ಸಾರಾಂಶ

ವಿವಿಧ ಸಂಘಟನೆ ಆಶ್ರಯದಲ್ಲಿ ಕೊಪ್ಪಳ ತಾಲೂಕಿನ ಗೊಂಡಬಾಳದಲ್ಲಿ ಉಚಿತ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ ಹಾಗೂ ರಕ್ತದಾನ ಶಿಬಿರ ನಡೆಯಿತು. ೨೧೦ ಫಲಾನುಭವಿಗಳು ಕಣ್ಣಿನ ಪರೀಕ್ಷೆ ಮಾಡಿಸಿಕೊಂಡರು. ಇದರಲ್ಲಿ ೫೦ಕ್ಕೂ ಹೆಚ್ಚು ಜನ ನೇತ್ರ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದರು.

ಕೊಪ್ಪಳ: ರಕ್ತದಾನ ಹಾಗೂ ನೇತ್ರದಾನ ಶ್ರೇಷ್ಠ ಎಂದು ಪಿಡಿಒ ಜಯಲಕ್ಷ್ಮಿ ಹೇಳಿದರು.

ತಾಲೂಕಿನ ಗೊಂಡಬಾಳ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಗೊಂಡಬಾಳ ಗ್ರಾಪಂ, ಗೊಂಡಬಾಳ ಪ್ರಾಥಮಿಕ ಆರೋಗ್ಯ ಕೇಂದ್ರ, ಎನ್.ಐ.ಎಂ.ಎ. ಕೊಪ್ಪಳ ಜಿಲ್ಲಾ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕೊಪ್ಪಳ ಜಿಲ್ಲಾ ಶಾಖೆ ಸಹಯೋಗದೊಂದಿಗೆ ಜರುಗಿದ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದ ಅವರು, ರಕ್ತದಾನ ಇನ್ನೊಬ್ಬರ ಜೀವ ಉಳಿಸುವ ಕಾರ್ಯ ಮಾಡುತ್ತದೆ. ರಕ್ತದಾನದಿಂದ ಹಲವರ ಜೀವ ಉಳಿಯುತ್ತದೆ. ನೇತ್ರದಾನದಿಂದ ದೃಷ್ಟಿ ಇಲ್ಲದವರಿಗೆ ದೃಷ್ಟಿ ಸಿಗುತ್ತದೆ. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉತ್ತಮ ಸಾಮಾಜಿಕ ಕಾರ್ಯ ಮಾಡುತ್ತದೆ ಎಂದರು.

ಜಿಲ್ಲಾ ಅಂಧತ್ವ ನಿವಾರಣ ಘಟಕದ ಅಧಿಕಾರಿ ಡಾ. ಪ್ರಕಾಶ ಎಚ್. ಮಾತನಾಡಿ, ಕಾಲಕಾಲಕ್ಕೆ ನೇತ್ರ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಅವಶ್ಯವಾಗಿದೆ. ಅದರಂತೆ ಸಾರ್ವಜನಿಕರು ತಮ್ಮ ನೇತ್ರಗಳನ್ನು ದಾನ ಮಾಡುವುದು ಮತ್ತು ಅಂಗಾಂಗಳನ್ನು ದಾನ ಮಾಡುವುದು ಅವಶ್ಯಕವಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟನೆಯನ್ನು ಗ್ರಾಪಂ ಉಪಾಧ್ಯಕ್ಷೆ ಸುಶೀಲಮ್ಮ ಬಳಗಾನೂರ ನೆರವೇರಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ವಿದ್ಯಾಶ್ರೀ ಪಿ.ಕೆ. ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಶ್ರೀನಿವಾಸ ಹ್ಯಾಟಿ, ನಿರ್ದೇಶಕರಾದ ಡಾ. ಶಿವನಗೌಡ ಪಾಟೀಲ್, ಡಾ. ವೀರಯ್ಯ ಹಿರೇಮಠ, ಡಾ. ಅನಿತಾ, ಡಾ. ರಾಧಾಕೃಷ್ಣ ರಡ್ಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಶರಣಪ್ಪ ಸಜ್ಜನ್, ಗ್ರಾಪಂ ಸದಸ್ಯರಾದ ಪಂಪಾಪತಿ ಹಳ್ಳಿಗುಡಿ, ಈರಣ್ಣ ಮಾಳೇಕೊಪ್ಪ, ಕೊಟ್ರೇಶ ಹಳ್ಳಿಕೇರಿ, ಸುನಂದಮ್ಮ ಆರೇರ ಇದ್ದರು. ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ ಸಜ್ಜನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ನೇತ್ರ ತಪಾಸಣೆಯ ಫಲಾನುಭವಿಗಳು, ಗ್ರಾಪಂ ಸಿಬ್ಬಂದಿ ಇದ್ದರು. ೨೧೦ ಫಲಾನುಭವಿಗಳು ಕಣ್ಣಿನ ಪರೀಕ್ಷೆ ಮಾಡಿಸಿಕೊಂಡರು. ಇದರಲ್ಲಿ ೫೦ಕ್ಕೂ ಹೆಚ್ಚು ಜನ ನೇತ್ರ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದರು. ಉಳಿದ ಫಲಾನುಭವಿಗಳು ಕನ್ನಡಕಗಳಿಗೆ ಆಯ್ಕೆಯಾದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಪಿಆರ್‌ಒ .ದೇವೇಂದ್ರಪ್ಪ ಹಿಟ್ನಾಳ ಕಾರ್ಯಕ್ರಮ ನಿರೂಪಿಸಿದರು.