ಸಾರಾಂಶ
ವಿಜಯಪುರ: ವಿಶ್ವದಲ್ಲಿ ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯ ಕೊಡುಗೆ ಅಪಾರವಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಿ ದೇಶ ಅಭಿವೃದ್ದಿಯಲ್ಲಿ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ರಾಜಶೇಖರ ಡಂಬಳ ಹೇಳಿದರು.

ರೋಟರಿ ದಿನಾಚರಣೆಯ ಅಂಗವಾಗಿ ನಗರದ ಸಂಜೀವಿನಿ ಶಿಕ್ಷಣ ಸಂಸ್ಥೆ ಮತ್ತು ರೋಟರಿ ಕ್ಲಬ್ ಆಫ್ ಬಿಜಾಪುರ ಉತ್ತರ ಹಾಗೂ ಜಿಲ್ಲಾ ರಕ್ತ ಕೇಂದ್ರ ಜಿಲ್ಲಾ ಆಸ್ಪತ್ರೆ ವಿಜಯಪುರ ಸಂಯುಕ್ತಾಶ್ರಯದಲ್ಲಿ ಸಂಜೀವಿನಿ ಫಾರ್ಮೆಸಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು. ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನವಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ರಕ್ತದಾನ ಮಾಡುವ ಮೂಲಕ ಸ್ವಸ್ಥ, ಸುಂದರ ಸಮಾಜ ನಿರ್ಮಾಣದಲ್ಲಿ ಕೈ ಜೋಡಿಸಬೇಕು ಎಂದು ಹೇಳಿದರು.ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಾನಂದ ಮಾಸ್ತಿಹೊಳಿ ಮಾತನಾಡಿ, ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಿದರು. ಸಂಜೀವಿನಿ ಫಾರ್ಮಸಿ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಸಂಸ್ಥೆಯ ಅಧ್ಯಕ್ಷ ಡಾ.ಸಿದ್ದಪ್ಪ ಸೊನ್ನದ ಹಾಗೂ ಪ್ರಾಚಾರ್ಯ ಬಸವರಾಜ್ ಸೊನ್ನದ ರಕ್ತದಾನ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಮಲ್ಲು ಕಲಾದಗಿ, ಕಾರ್ಯದರ್ಶಿ ರಾಜ ಶಾಹ, ಡಾ.ಪ್ರಾಣೇಶ್ ಜಾಗೀರ್ದಾರ್, ಸಂತೋಷ್ ಜಾರಸಂಗ, ವಾಡೆಕರ್, ಮೋಹನ್ ಬಗಲಿ ಉಪಸ್ಥಿತರಿದ್ದರು.