ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮುಡಿಪು ರೆಡ್ ಕ್ರಾಸ್ ಘಟಕದ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಹಾಗೂ ಲಯನ್ಸ್ ಕ್ಲಬ್ ಕಾವೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು.

ಉಳ್ಳಾಲ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮುಡಿಪು ರೆಡ್ ಕ್ರಾಸ್ ಘಟಕದ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಹಾಗೂ ಲಯನ್ಸ್ ಕ್ಲಬ್ ಕಾವೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು.ಕೈಗಾರಿಕೋದ್ಯಮಿ ಹಾಗೂ ಸಮಾಜಸೇವಕರಾದ ಲಯನ್ ಮೋಹನ್ ದಾಸ್ ಶೆಟ್ಟಿ ಉದ್ಘಾಟಿಸಿದರು. ಅವರು ಲಯನ್ಸ್ ಕ್ಲಬ್‌ನ ಸಮಾಜಮುಖಿ ಕಾರ್ಯಗಳು ಹಾಗೂ ರಕ್ತದಾನದ ಮಹತ್ವವನ್ನು ವಿವರಿಸಿ, ರಕ್ತದಾನವು ಜೀವ ಉಳಿಸುವ ಮಹತ್ವದ ಸೇವೆಯಾಗಿದೆ ಎಂದು ತಿಳಿಸಿದರು.ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರಾದ ಸುರೇಖಾ, ನಾಸಿರ್ ನಡುಪದವು ಅವರು ಯುವಜನರು ಸಮಾಜದ ಅಭಿವೃದ್ಧಿಗೆ ಸಕ್ರಿಯವಾಗಿ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕ ಹೈದರ್ ಅಲಿ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸತೀಶ್ ಶೆಟ್ಟಿ ಅಧ್ಯಕ್ಷೀಯ ಭಾಷಣ ಮಾಡಿದರು.ನಿಶಿದಾ ನಿರೂಪಿಸಿ, ವಂದಿಸಿದರು. ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜಕರಾದ ಡಾ. ಶೇಷಪ್ಪ ಹಾಗೂ ಐಕ್ಯೂಎಸಿ ಸಂಯೋಜಕರಾದ ಕವಿತಾ ಉಪಸ್ಥಿತರಿದ್ದರು.

ಕಾಲೇಜಿನಲ್ಲಿ ಪ್ರತಿವರ್ಷ ರಕ್ತದಾನ ಶಿಬಿರವನ್ನು ಆಯೋಜಿಸುವ ಮೂಲಕ ಸಮಾಜಸೇವೆಗೆ ಆದ್ಯತೆ ನೀಡಲಾಗುತ್ತಿದೆ.