ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

| Published : Mar 26 2024, 01:19 AM IST

ಸಾರಾಂಶ

ಖಾನಾಪುರ: ತಾಲೂಕಿನ ಅಶೋಕನಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಇಲಾಖೆ, ಬಿಮ್ಸ್ ಮತ್ತು ಬೆಳಗಾವಿ ರಕ್ತ ಭಂಡಾರಗಳ ನೇತೃತ್ವದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಶಿಬಿರವನ್ನು ತಾಲೂಕು ವೈದ್ಯಾಧಿಕಾರಿ ಡಾ.ಮಹೇಶ ಕಿವಡಸಣ್ಣವರ ಉದ್ಘಾಟಿಸಿ ರಕ್ತದಾನದ ಮಹತ್ವದ ಬಗ್ಗೆ ವಿವರಿಸಿದರು.

ಖಾನಾಪುರ: ತಾಲೂಕಿನ ಅಶೋಕನಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಇಲಾಖೆ, ಬಿಮ್ಸ್ ಮತ್ತು ಬೆಳಗಾವಿ ರಕ್ತ ಭಂಡಾರಗಳ ನೇತೃತ್ವದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಶಿಬಿರವನ್ನು ತಾಲೂಕು ವೈದ್ಯಾಧಿಕಾರಿ ಡಾ.ಮಹೇಶ ಕಿವಡಸಣ್ಣವರ ಉದ್ಘಾಟಿಸಿ ರಕ್ತದಾನದ ಮಹತ್ವದ ಬಗ್ಗೆ ವಿವರಿಸಿದರು. ಶಿಬಿರದಲ್ಲಿ ಭಾಗವಹಿಸಿದ್ದ ಅಶೋಕನಗರ ಹಾಗೂ ಅಕ್ಕಪಕ್ಕದ ಗ್ರಾಮಗಳ 26 ದಾನಿಗಳು ಜಿಲ್ಲಾ ರಕ್ತ ಭಂಡಾರಕ್ಕೆ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಬಿಮ್ಸ್‌ನ ವೈದ್ಯಾಧಿಕಾರಿ ಡಾ.ಶ್ರೀದೇವಿ ಬೊಬಾಟೆ, ಅಶೋಕನಗರ ವೈದ್ಯಾಧಿಕಾರಿ ಡಾ.ಅಕ್ಷತಾ, ಟಿಎಚ್‌ಒ ಕಚೇರಿಯ ಶಿವಾನಂದ ಬುಡರಕಟ್ಟಿ, ಬೀರಪ್ಪ ಪಾಟೀಲ ಸೇರಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಇತರರು ಇದ್ದರು.