ಸಾರಾಂಶ
ಶ್ರವಣಬೆಳಗೊಳದ ಬಾಹುಬಲಿ ಎಂಜಿನಿಯರಿಂಗ್ ಕಾಲೇಜಿನ ವತಿಯಿಂದ ಚನ್ನರಾಯಪಟ್ಟಣದ ಸ್ವಯಂ ಪ್ರೇರಿತ ರಕ್ತ ಕೇಂದ್ರ ಹಾಗೂ ರೋಟರಿ ಚನ್ನರಾಯಪಟ್ಟಣ ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಈ ಶಿಬಿರದಲ್ಲಿ ಸುಮಾರು ೭೦ ವಿದ್ಯಾರ್ಥಿಗಳು ರಕ್ತದಾನ ಮಾಡಿದ್ದು, ೨೦೦ಕ್ಕೂ ಹೆಚ್ಚು ಮಕ್ಕಳು ಆರೋಗ್ಯ ತಪಾಸಣೆ ಮತ್ತು ರಕ್ತದ ಗುಂಪು ಪರೀಕ್ಷೆ ಮಾಡಿಸಿದರು.
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ತಾಲೂಕಿನ ಶ್ರವಣಬೆಳಗೊಳದ ಬಾಹುಬಲಿ ಎಂಜಿನಿಯರಿಂಗ್ ಕಾಲೇಜಿನ ವತಿಯಿಂದ ಚನ್ನರಾಯಪಟ್ಟಣದ ಸ್ವಯಂ ಪ್ರೇರಿತ ರಕ್ತ ಕೇಂದ್ರ ಹಾಗೂ ರೋಟರಿ ಚನ್ನರಾಯಪಟ್ಟಣ ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.ಈ ಶಿಬಿರದಲ್ಲಿ ಸುಮಾರು ೭೦ ವಿದ್ಯಾರ್ಥಿಗಳು ರಕ್ತದಾನ ಮಾಡಿದ್ದು, ೨೦೦ಕ್ಕೂ ಹೆಚ್ಚು ಮಕ್ಕಳು ಆರೋಗ್ಯ ತಪಾಸಣೆ ಮತ್ತು ರಕ್ತದ ಗುಂಪು ಪರೀಕ್ಷೆ ಮಾಡಿಸಿದರು.ಶಿಬಿರವನ್ನು ಕುರಿತು ಮಾತಾಡಿದ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್‌ರವರು ವಿದ್ಯಾರ್ಥಿಗಳಿಗೆ ರಕ್ತದಾನ ಮಾಡುವುದರ ಮಹತ್ವವನ್ನು ಅರಿಯಬೇಕು ಹಾಗೂ ರಕ್ತದಾನ ಮಾಡುವುದು ಪ್ರತಿಯೊಬ್ಬ ಯುವಕರ ಕರ್ತವ್ಯ ಎಂದು ಭಾವಿಸಬೇಕು ಮತ್ತು ಹೆಚ್ಚಿನ ರೀತಿಯಲ್ಲಿ ರಕ್ತದಾನ ಶಿಬಿರಗಳಲ್ಲಿ ಸ್ವಯಂಪ್ರೇರಿತವಾಗಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.
ಸ್ವಯಂ ಪ್ರಯುಕ್ತ ರಕ್ತ ಕೇಂದ್ರದ ಮುಖ್ಯಸ್ಥರಾದ ಭರತ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ರಕ್ತದ ಮಹತ್ವ ಹಾಗೂ ಏಕೆ ರಕ್ತದಾನ ಮಾಡಬೇಕು ಮತ್ತು ರಕ್ತದಾನ ಮಾಡುವುದರಿಂದ ಆಗುವ ಅನುಕೂಲಗಳು ಹಾಗೆ ರಕ್ತದಾನ ಎಂಬುದು ೧೮ ವರ್ಷ ಮೇಲ್ಪಟ್ಟ ಎಲ್ಲಾ ವ್ಯಕ್ತಿಗಳ ಸಾಮಾಜಿಕ ಹಕ್ಕು ಎಂದು ಹೇಳುವುದರ ಜೊತೆಗೆ ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಾಗುವುದಿಲ್ಲ. ಒಬ್ಬ ವ್ಯಕ್ತಿ ಜೀವ ಉಳಿಸಲು ಇನ್ನೊಬ್ಬ ಸಹ ಹೃದಯ ರಕ್ತದಾನಿಗೆ ಮಾತ್ರ ಸಾಧ್ಯ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷರು ಬಿ .ವಿ ವಿಜಯ್, ರೆಡ್‌ಕ್ರಾಸ್ ಸಂಸ್ಥೆ ಶಿವಕುಮಾರ್ ಹಾಗೂ ರಕ್ತನಿಧಿ ಕೇಂದ್ರದ ಮ್ಯಾನೇಜರ್ ಆದ ಉದಯಶಂಕರ್ ಇದ್ದರು.