ಸಾರಾಂಶ
ಚಿಕ್ಕಮಗಳೂರು, ಅನ್ನದಾನ, ವಿದ್ಯಾದಾನದಂತೆ ರಕ್ತದಾನವೂ ಶ್ರೇಷ್ಠ ದಾನವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ. ಹನುಮಂತಪ್ಪ ಹೇಳಿದರು.
ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಅನ್ನದಾನ, ವಿದ್ಯಾದಾನದಂತೆ ರಕ್ತದಾನವೂ ಶ್ರೇಷ್ಠ ದಾನವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ. ಹನುಮಂತಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ ಹಾಗೂ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನ ಉದ್ಘಾಟಿಸಿ ಮಾತನಾಡಿದರು. ಕೃತಕ ರಕ್ತ ತಯಾರಿಸಲು ಸಾಧ್ಯವಿಲ್ಲ. ಆದ್ದರಿಂದ ರಕ್ತವನ್ನು ಆರೋಗ್ಯವಂತ ವ್ಯಕ್ತಿಯಿಂದ ಪಡೆದು ಮತ್ತೊಬ್ಬರಿಗೆ ದಾನ ಮಾಡಬೇಕಾಗುತ್ತದೆ. ರಕ್ತದಾನ ಮಾಡುವಾಗ ಭಯ, ಆತಂಕ ಬೇಡ. ಒಬ್ಬರು ದಾನ ಮಾಡಿದ ರಕ್ತ 3 ಜನರ ಜೀವ ಉಳಿಸಲು ಸಹಾಯವಾಗುತ್ತದೆ. ಆದುದರಿಂದ ಪ್ರತಿಯೊಬ್ಬರು ರಕ್ತದಾನ ಮಾಡುವಂತೆ ತಿಳಿಸಿದರು. ಜಿಲ್ಲಾ ಆಸ್ಪತ್ರೆ ರಕ್ತದಾನ ಕೇಂದ್ರದ ವೈದ್ಯಾಧಿಕಾರಿ ಡಾ. ಮುರಳೀಧರ್ ಮಾತನಾಡಿ, ಆರೋಗ್ಯವಂತ ವ್ಯಕ್ತಿಯಿಂದ ಮಾತ್ರ ರಕ್ತವನ್ನು ದಾನ ಪಡೆಯುವುದರಿಂದ ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಆರೋಗ್ಯ ಕಾಪಾಡಿಕೊಂಡು ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಪ್ರಾಣ ಉಳಿಸಬೇಕು. ರಕ್ತ ಕೇಂದ್ರದಲ್ಲಿ 5 ಕಾಯಿಲೆಗಳಿಗೆ ಪರೀಕ್ಷೆ ಮಾಡಲಾಗುತ್ತದೆ. ಈ ವರ್ಷದ ಘೋಷ ವಾಕ್ಯವಾದ 20 ವರ್ಷದ ರಕ್ತದಾನದ ಸಂಭ್ರಮ, ಧನ್ಯವಾದ ರಕ್ತದಾನಿಗಳೇ ಹಾಗೂ ನಿಮ್ಮ ಜೀವದಾನದ ಕೊಡುಗೆ ಅತ್ಯಮೂಲ್ಯ ಎಂದರು.ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ 5 ಮಂದಿ ದಾನಿಗಳಿಗೆ ಮತ್ತು 5 ಸಂಘ ಸಂಸ್ಥೆಗಳಿಗೆ ಪ್ರಮಾಣ ಪತ್ರ, ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಜಿಲ್ಲಾಸ್ಪತ್ರೆ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಲಜಾಕ್ಷಿ ಪ್ರಮಾಣ ವಚನ ಬೋಧಿಸಿದರು.ರಕ್ತದಾನ ಶಿಬಿರದಲ್ಲಿ ಇಲಾಖೆ ಅಧಿಕಾರಿಗಳು, ಕಾಲೇಜು ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.
ವೈದ್ಯಕೀಯ ಕಾಲೇಜಿನ ಬಯೋ ಕೆಮಿಸ್ಟ್ರೀ ವಿಭಾಗದ ಮುಖ್ಯಸ್ಥ, ಪ್ರಾಧ್ಯಾಪಕ ಡಾ. ದೇಶಪಾಂಡೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯಕ್ರಮಾಧಿ ಕಾರಿ ಡಾ. ಹರೀಶ್ ಬಾಬು, ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರು, ಇಲಾಖೆ ಸಿಬ್ಬಂದಿ ಹಾಜರಿದ್ದರು.1 ಕೆಸಿಕೆಎಂ 5
ಚಿಕ್ಕಮಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನವನ್ನು ನ್ಯಾ. ವಿ. ಹನುಮಂತಪ್ಪ ಅವರು ಉದ್ಘಾಟಿಸಿದರು. ಡಾ. ಮುರಳೀಧರ್, ಡಾ. ದೇಶಪಾಂಡೆ ಇದ್ದರು.