ರಕ್ತದಾನ ಮಾಡುವುದರಿಂದ ಮತ್ತೊಂದು ಜೀವ ಉಳಿಸಿದ ತೃಪ್ತಿ ಹಾಗೂ ಮಾನಸಿಕ ಶಾಂತಿ ಇರುತ್ತದೆ. ರಕ್ತದಾನವು ದೇಹದಲ್ಲಿ ಹೊಸ ರಕ್ತಕಣಗಳ ಉತ್ಪಾದನೆಯನ್ನು ಉತ್ತೇಜಿಸುತ್ತದೆ.
ಗದಗ: ರಕ್ತದಾನವು ಶ್ರೇಷ್ಠದಾನವಾಗಿದ್ದು, ರಕ್ತದಾನ ಮಾಡುವುದರಿಂದ ತುರ್ತು ಸಂದರ್ಭದಲ್ಲಿ, ಅಪಘಾತಗಳು ಸಂಭವಿಸಿದಾಗ, ಶಸ್ತ್ರ ಚಿಕಿತ್ಸೆ ಸಂದರ್ಭಗಳಲ್ಲಿ ಮತ್ತೊಂದು ಜೀವ ಉಳಿಸಲು ಸಹಾಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಹಯೋಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತ್ಯುತ್ಸವ ಪ್ರಯುಕ್ತ ನಡೆದ ರಕ್ತದಾನ ಶಿಬಿರವದಲ್ಲಿ ಮಾತನಾಡಿದರು.
ರಕ್ತದಾನ ಮಾಡುವುದರಿಂದ ಮತ್ತೊಂದು ಜೀವ ಉಳಿಸಿದ ತೃಪ್ತಿ ಹಾಗೂ ಮಾನಸಿಕ ಶಾಂತಿ ಇರುತ್ತದೆ. ರಕ್ತದಾನವು ದೇಹದಲ್ಲಿ ಹೊಸ ರಕ್ತಕಣಗಳ ಉತ್ಪಾದನೆಯನ್ನು ಉತ್ತೇಜಿಸುತ್ತದೆ ಎಂದರು.ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ನಿವೃತ್ತ ಶಿಕ್ಷಕ ಎಸ್.ಎನ್. ಬಳ್ಳಾರಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ ಜಯಂತಿ ಪ್ರಯುಕ್ತ ಹಮ್ಮಿಕೊಂಡಿರುವ ರಕ್ತದಾನ ಶಿಬಿರ ಮೆಚ್ಚುವಂತಹದ್ದು. ಮತ್ತೊಂದು ಜೀವ ಉಳಿಸುವ ರಕ್ತದಾನ ಮಹಾದಾನವಾಗಿದೆ ಎಂದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಹಸೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಡಿಡಿಪಿಐ ಆರ್.ಎಸ್. ಬುರುಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ ಸೇರಿದಂತೆ ಸಮಾಜದ ಗಣ್ಯರು, ಹಿರಿಯರು, ಮುಖಂಡರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.ವಿಶ್ವ ಆರೋಗ್ಯ ದಿನಾಚರಣೆಗದಗ: ಸಂಕನೂರ ಇನ್ಸುಟ್ಯೂಟ್ ಆಫ್ ನರ್ಸಿಂಗ್ ಮತ್ತು ಸಂಕನೂರ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಆಶ್ರಯದಲ್ಲಿ ಈಚೆಗೆ ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಯಿತು.ಅನೆಸ್ತೆಸಿಯಾ ತಜ್ಞ ಡಾ. ವಿನಾಯಕ ಪಂಚಗಾರ ಮಾತನಾಡಿ, ಉತ್ತಮ ಆರೋಗ್ಯದ ಕ್ರಮಗಳು ನಮ್ಮ ಸುತ್ತಮುತ್ತಲಿನ ವಾತಾವರಣ ಶುದ್ಧವಾಗಿಟ್ಟುಕೊಂಡು ಆರೋಗ್ಯವನ್ನು ಕಾಪಾಡುವುದರಿಂದ ಉತ್ತಮ ಆರೋಗ್ಯ ಸಿಗುವುದರ ಕುರಿತು ತಿಳಿಸಿದರು.ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ನಿರ್ದೇಶಕ ಡಾ. ಪ್ರಕಾಶ ಸಂಕನೂರ ಅವರು, ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು. ಉದ್ಯೋಗ ಮತ್ತು ಮಾಹಿತಿ ತರಬೇತಿ ಕೇಂದ್ರದ ಡಾ. ಶ್ವೇತಾ ಸಂಕನೂರ ಮುಂತಾದವರು ಮಾತನಾಡಿದರು.
ಪ್ರಾಚಾರ್ಯೆ ಡಾ. ಮೀನಾಕ್ಷಿ ದೇವಾಂಗಮಠ ವಿಷಯ ಮಂಡಿಸಿದರು. ಉಪಪ್ರಾಚಾರ್ಯ ವಿನ್ಸಂಟ ಪಾಟೀಲ ಹಾಗೂ ಸಂಕನೂರ ಆಸ್ಪತ್ರೆ ಮತ್ತು ಸಂಕನೂರ ಇನ್ಸುಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು. ನೇಹಾ ಎಚ್. ನಿರೂಪಿಸಿದರು. ಸಹನಾ ವಿ. ಪರಿಚಯಿಸಿದರು. ಸುಭಾಸ ಎಚ್. ವಂದಿಸಿದರು.