ರಕ್ತದಾನ ಅತ್ಯಂತ ಶ್ರೇಷ್ಠ ದಾನ: ಪ್ರಾಂಶುಪಾಲೆ ಡಾ.ಪ್ರತಿಮಾ

| Published : May 06 2025, 12:15 AM IST

ರಕ್ತದಾನ ಅತ್ಯಂತ ಶ್ರೇಷ್ಠ ದಾನ: ಪ್ರಾಂಶುಪಾಲೆ ಡಾ.ಪ್ರತಿಮಾ
Share this Article
  • FB
  • TW
  • Linkdin
  • Email

ಸಾರಾಂಶ

ಇಂದಿನ ದಿನಮಾನದಲ್ಲಿ ಜೀವಕ್ಕೆ ಸಂಜೀವಿನಿಯಾದ ರಕ್ತಕ್ಕೆ ಅಪಾರ ಬೇಡಿಕೆ ಇದೆ. ರಕ್ತವು ಮಾರುಕಟ್ಟೆಯಲ್ಲಿ ಸಿಗುವುದಿಲ್ಲ. ಆರೋಗ್ಯವಂತ ಯುವಕ ಯುವತಿಯರು ದಾನಿಗಳಾಗಿ ಕನಿಷ್ಠ ಮೂರು ತಿಂಗಳಿಗೆ ಒಮ್ಮೆ ರಕ್ತದಾನ ಮಾಡಿ ಅಮೂಲ್ಯವಾದ ಜೀವಗಳನ್ನು ಉಳಿಸುವ ಸಂಕಲ್ಪ ಮಾಡಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಜೀವಗಳನ್ನು ಉಳಿಸಲು ಸಂಜೀವಿನಿಯಾದ ರಕ್ತದಾನವು ಅತ್ಯಂತ ಶ್ರೇಷ್ಠ ದಾನವಾಗಿದೆ ಎಂದು ಪ್ರಾಂಶುಪಾಲೆ ಡಾ.ಪ್ರತಿಮಾ ಹೇಳಿದರು.

ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರವನ್ನು ತಾವೇ ರಕ್ತದಾನ ಮಾಡಿ ಚಾಲನೆ ನೀಡಿದರು.

ಇಂದಿನ ದಿನಮಾನದಲ್ಲಿ ಜೀವಕ್ಕೆ ಸಂಜೀವಿನಿಯಾದ ರಕ್ತಕ್ಕೆ ಅಪಾರ ಬೇಡಿಕೆ ಇದೆ. ರಕ್ತವು ಮಾರುಕಟ್ಟೆಯಲ್ಲಿ ಸಿಗುವುದಿಲ್ಲ. ಆರೋಗ್ಯವಂತ ಯುವಕ ಯುವತಿಯರು ದಾನಿಗಳಾಗಿ ಕನಿಷ್ಠ ಮೂರು ತಿಂಗಳಿಗೆ ಒಮ್ಮೆ ರಕ್ತದಾನ ಮಾಡಿ ಅಮೂಲ್ಯವಾದ ಜೀವಗಳನ್ನು ಉಳಿಸುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ.ಅಜಿತ್ ಮಾತನಾಡಿ, ಶಿಬಿರ ಆಯೋಜಿಸಿ ಕಾಲೇಜಿನಲ್ಲಿ ಹೆಣ್ಣುಮಕ್ಕಳು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುತ್ತಿರುವುದು ನಾಗರಿಕ ಸಮಾಜಕ್ಕೆ ಮಾದರಿ ಎಂದರು.

ಈ ವೇಳೆ ಸಾರ್ವಜನಿಕ ಆಸ್ಪತ್ರೆ ರಕ್ತನಿಧಿ ಕೇಂದ್ರದ ಅಧಿಕಾರಿ ಸತೀಶ್, ಎನ್.ಎಸ್.ಎಸ್ ಅಧಿಕಾರಿ ಚೇತನ್ ಕುಮಾರ್, ಮಧು, ಯುವ ರೆಡ್ ಕ್ರಾಸ್ ಘಟಕದ ಪದಾಧಿಕಾರಿಗಳು ಇದ್ದರು.

ಮಂಡ್ಯ ಎಜುಕೇಷನ್‌ ಶಾಲೆಗೆ ಉತ್ತಮ ಫಲಿತಾಂಶ

ಮಂಡ್ಯ: ಇಲ್ಲಿನ ಕಾವೇರಿ ನಗರದಲ್ಲಿರುವ ಮಂಡ್ಯ ಎಜುಕೇಷನ್ ಸೊಸೈಟಿ ಶಾಲೆಗೆ ಎಸ್‌ಎಸ್ಎಲ್‌ಸಿಯಲ್ಲಿ ಉತ್ತಮ ಫಲಿತಾಂಶ ಬಂದಿದ್ದು, ನಾಲ್ಕು ವಿದ್ಯಾರ್ಥಿಗಳು ಅತ್ಯುತ್ತಮ ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ಧತ್ರಿ ಆರ್‌.ಪಿಸ್ಸೆ 599 (ಶೇ.95.84) , ಡಿ.ಕೆ.ಚೈತ್ರಾ 599 (ಶೇ.95.84) , ಎಲ್‌.ಆರ್‌.ಶರತ್‌ಕುಮಾರ್‌ 577 (ಶೇ.92.32) , ಆರ್‌.ದೀಕ್ಷಿತ್‌ 509 (ಶೇ.81.44) ಅಂಕ ಪಡೆದಿದ್ದಾರೆ. ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಮಂಡ್ಯ ಎಜುಕೇಷನ್‌ ಸೊಸೈಟಿ ಅಧ್ಯಕ್ಷ ಎಂ.ವಿ.ಧರಣೇಂದ್ರಯ್ಯ ಅವರು ಸನ್ಮಾನಿಸಿ ಗೌರವಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.