ಕುಶಾಲನಗರ ತಾಲೂಕು ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಕುಶಾಲನಗರ ವಾಸವಿ ಮಹಲ್ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆದ ಶಿಬಿರ
ಕುಶಾಲನಗರ: ಕುಶಾಲನಗರ ತಾಲೂಕು ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಕುಶಾಲನಗರ ವಾಸವಿ ಮಹಲ್ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆದ ಶಿಬಿರವನ್ನು ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ, ತಹಸಿಲ್ದಾರ್ ಕಿರಣ್ ಜಿ ಗೌರಯ್ಯ ಉದ್ಘಾಟಿಸಿದರು.
ಕುಶಾಲನಗರ ತಾಲೂಕು ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಎಸ್ ಕೆ ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಡಾ ಕರುಂಬಯ್ಯ ರಕ್ತದಾನದ ಮಹತ್ವದ ಬಗ್ಗೆ ಮಾತನಾಡಿದರು. ತಾಲೂಕು ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಕೆ ಪಿ ಚಂದ್ರಶೇಖರ್ ಪ್ರಮುಖರಾದ ಅಂಜನ್, ಎಚ್ಎಂ ಚಂದ್ರು ಓಬಳ ರೆಡ್ಡಿ, ಕೆ ಎನ್ ದೇವರಾಜ್, ಮುನಿಸ್ವಾಮಿ, ಜಗದೀಶ್, ರಾಜೇಗೌಡ ಮತ್ತು ಇತರರು ಇದ್ದರು.