ಸಾರಾಂಶ
ಕಳೆದ ವರ್ಷವೂ ಸಹ ರಾಜ್ಯಮಟ್ಕಕ್ಕೆ ಆಯ್ಕೆಯಾಗಿದ್ದ ಬಿ.ಎಂ.ನವ್ಯಶ್ರೀ, ಶಿವಮೊಗ್ಗದಲ್ಲಿ ನಡೆದ ಕಲೋತ್ಸವ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಗಳಿಸಿದ್ದರು. ನವ್ಯಶ್ರೀ ನಗರದ ಗುರುದೇವ ಲಲಿತಕಲಾ ಅಕಾಡೆಮಿಯ ನಿರ್ದೇಶಕರಾದ ವಿದುಷಿ ಡಾ.ಚೇತನ ರಾಧಾಕೃಷ್ಣ ಅವರ ಭರತನಾಟ್ಯ ಶಾಲೆಯಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವಕ್ಕೆ ನಗರದ ಸಂತ ಜೋಸೆಫ್ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿನಿ ಬಿ.ಎಂ.ನವ್ಯಶ್ರೀ ಆಯ್ಕೆಯಾಗಿದ್ದಾರೆ.ನಗರದ ಸಂತ ಜೋಸೆಫ್ ಶಾಲೆಯಲ್ಲಿ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಬಿ.ಎಂ.ನವ್ಯಶ್ರೀ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕಳೆದ ವರ್ಷವೂ ಸಹ ರಾಜ್ಯಮಟ್ಕಕ್ಕೆ ಆಯ್ಕೆಯಾಗಿದ್ದ ಬಿ.ಎಂ.ನವ್ಯಶ್ರೀ, ಶಿವಮೊಗ್ಗದಲ್ಲಿ ನಡೆದ ಕಲೋತ್ಸವ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಗಳಿಸಿದ್ದರು. ನವ್ಯಶ್ರೀ ನಗರದ ಗುರುದೇವ ಲಲಿತಕಲಾ ಅಕಾಡೆಮಿಯ ನಿರ್ದೇಶಕರಾದ ವಿದುಷಿ ಡಾ.ಚೇತನ ರಾಧಾಕೃಷ್ಣ ಅವರ ಭರತನಾಟ್ಯ ಶಾಲೆಯಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾರೆ.ಕೇಂದ್ರ ಸಚಿವ ಎಚ್ಡಿಕೆಗೆ ಮಹಾಲಿಂಗಪ್ಪ ಮನವಿ ಸಲ್ಲಿಕೆಮಂಡ್ಯ:
ತಾಲೂಕಿನ ಬಸರಾಳು ಹೋಬಳಿ ಕೇಂದ್ರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗುವಂತೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜಿಲ್ಲಾ ಜೆಡಿಎಸ್ ಮುಖಂಡ ಮುದ್ದನಘಟ್ಟ ಮಹಾಲಿಂಗಪ್ಪ ಮನವಿ ಮಾಡಿದರು.ನವದೆಹಲಿಯ ಉದ್ಯೋಗ ಭವನದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅಭಿನಂದಿಸಿದ ನಂತರ ನೀರಾವರಿ ವಂಚಿತ ತಾಲೂಕು ಬಸರಾಳು ಹೋಬಳಿ ಕೇಂದ್ರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ ಇರುವುದರಿಂದ ಜನರಿಗೆ ಅನುಕೂಲವಾಗುವಂತಹ ಉದ್ದಿಮೆ ಸ್ಥಾಪಿಸುವಂತೆ ಮನವಿ ಮಾಡಿದರು.