Body of missing Rakshith found hanging
ಚಿಕ್ಕಮಗಳೂರು: ಚಿಕ್ಕಮಗಳೂರಿನ ಹಾಸ್ಟೆಲ್ನಿಂದ ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ಪವಿತ್ರವನದ ಬಳಿ ಬೆಳಕಿಗೆ ಬಂದಿದೆ.ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ರಕ್ಷಿತ್ (19) ಮೃತ ವಿದ್ಯಾರ್ಥಿ. ಈತ ಚಿಕ್ಕ ಮಗಳೂರಿನ ಸಿಐಎಂಎಸ್ (CIMS) ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದನು.
ನ.7ರಂದು ಮಧ್ಯಾಹ್ನ 12.34ರ ಸುಮಾರಿಗೆ ರಕ್ಷಿತ್ ಹಾಸ್ಟೆಲ್ನಿಂದ ನಾಪತ್ತೆಯಾಗಿದ್ದ. ವಿದ್ಯಾರ್ಥಿ ಕಾಣೆಯಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಪರಿಚಯಸ್ಥರು ಆತನ ಹುಡುಕಾಟ ನಡೆಸಿದ್ದರು. ಐದು ದಿನಗಳಿಂದ ಸುಳಿವು ಲಭ್ಯವಾಗಿರಲಿಲ್ಲ.ಈ ನಡುವೆ ಶುಕ್ರವಾರ ನಗರದ ಪವಿತ್ರವನದ ಸಮೀಪ ರಕ್ಷಿತ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿದ್ಯಾರ್ಥಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಹಾಗೂ ಸಂಬಂಧಿಕರಲ್ಲಿ ತೀವ್ರ ಆಘಾತ ಮತ್ತು ದುಃಖ ಮನೆಮಾಡಿದೆ.ಚಿಕ್ಕಮಗಳೂರು ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣದ ಸ್ಥಳಕ್ಕೆಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.
