ಲಾರಿಗೆ ಹಿಂದಿನಿಂದ ಬೊಲೇರೋ ವಾಹನ ಡಿಕ್ಕಿ: ಇಬ್ಬರ ಸಾವು

| Published : Apr 26 2024, 12:45 AM IST

ಲಾರಿಗೆ ಹಿಂದಿನಿಂದ ಬೊಲೇರೋ ವಾಹನ ಡಿಕ್ಕಿ: ಇಬ್ಬರ ಸಾವು
Share this Article
  • FB
  • TW
  • Linkdin
  • Email

ಸಾರಾಂಶ

ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ ಬೆಳಗಿನ ಜಾವ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬೊಲೆರೋ ಪಿಕಪ್ ವಾಹನವು ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕನ್ನಡಪ್ರಭ ವಾರ್ತೆ ಶಿರಾಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ ಬೆಳಗಿನ ಜಾವ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬೊಲೆರೋ ಪಿಕಪ್ ವಾಹನವು ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತಪಟ್ಟವರನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಾಮತೀರ್ಥ ಗ್ರಾಮದ ಉಮೇಶ್ ಮಟ್ಟಪ್ಪಗೋಳ (36) ಹಾಗೂ ಗಣಪತಿ ಸುರೇಶ್ (17) ಎಂದು ಗುರುತಿಸಲಾಗಿದೆ. ಚಿಕ್ಕನಹಳ್ಳಿ ಬಳಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಅಪಘಾತದಿಂದ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ತಕ್ಷಣ ಕಳ್ಳಂಬೆಳ್ಳ ಪೊಲೀಸರು ಸ್ಥಳಕ್ಕಾಗಮಿಸಿ ವಾಹನಗಳನ್ನು ತೆರವುಗೊಳಿಸುವ ಕಾರ್ಯ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.