ಸಾರಾಂಶ
ಉಳ್ಳಾಲ : ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬ ಭಾಗಿಯಾಗಿತ್ತು.
ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ, ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಕ್ರಿಕೆಟಿಗ ಕೆ.ಎಲ್. ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್‌ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ ವಿ.ಎಂ. ಕಾಮತ್ ಸೇರಿದಂತೆ ಒಟ್ಟು ಅವರ ಪರಿಚಿತರೇ ಆಗಿರುವ 9 ಮಂದಿಯ ಹರಕೆ ಕೋಲವನ್ನು ಕೊರಗಜ್ಜನ ಕಟ್ಟೆಯಲ್ಲಿ ಎರಡು ತಿಂಗಳ ಹಿಂದೆ ಬರೆಸಲಾಗಿತ್ತು.
ಭಾನುವಾರ ನಡೆದ ಹರಕೆ ಕೋಲದಲ್ಲಿ ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಭಾಗಿಯಾಗಿದ್ದರು. ಕತ್ರಿನಾ, ರೇಷ್ಮಾ ಶೆಟ್ಟಿ, ಆಧ್ಯಾ ಶೆಟ್ಟಿ ಪರಂಪರೆಯಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿ ಉಳಿದರು. ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದಾರೆ. ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕೊರಗಜ್ಜನ ಕಟ್ಟೆಯ ಕಚೇರಿ ಅಧಿಕೃತರಲ್ಲಿ ಮನವಿ ಮಾಡಿದ್ದರು. ಅಲ್ಲದೇ ಸ್ಥಳದಲ್ಲಿ ಫೋಟೊ ತೆಗೆಯಲು ಬಿಡದೆ, ತೆಗೆದವರನ್ನು ಡಿಲೀಟ್ ಮಾಡುವಂತೆ ಕಟ್ಟೆಯೊಳಗೆ ಬೆಳಕಿಲ್ಲದೆ ನಡೆಯುತ್ತಿದ್ದ ಕೋಲವನ್ನು ಹೊರಗೆ ನಿಂತಿದ್ದ ನಿಂತ ಕತ್ರಿನಾ ಸೇರಿದಂತೆ ಉಳಿದವರು ಕಣ್ಣುಮುಚ್ಚಿ ಪ್ರಾರ್ಥನೆಯಲ್ಲಿ ಭಾಗಿಯಾದರು.
ಕತ್ರಿನಾ ಕೈಫ್ ಕಚೇರಿಯಲ್ಲಿ ಇರುವ ಕುರಿತ ಭಾವಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.