ನಾಡಬಾಂಬ್ ಸ್ಫೋಟ: ರೈತನಿಗೆ ತೀವ್ರ ಗಾಯ

| Published : Feb 10 2024, 01:45 AM IST

ಸಾರಾಂಶ

ಈ ಭಾಗದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆ ನಿರಂತರವಾಗಿ ನಡೆಯುತ್ತದೆ ಎನ್ನಲಾಗುತ್ತಿದ್ದು, ಇಂತಹ ಕೃತ್ಯಗಳಲ್ಲಿ ಕೆಲ ಅರಣ್ಯ ಇಲಾಖೆ ಸಿಬ್ಬಂದಿಗಳ ಕೈವಾಡ ಕೂಡ ಇರುತ್ತದೆ ಎಂಬ ಆರೋಪ ಕೂಡ ಕೇಳಿ ಬರುತ್ತಿದೆ.

ಮುಂಡಗೋಡ:

ನಾಡಬಾಂಬ್ ಸ್ಫೋಟಗೊಂಡು ರೈತನೋರ್ವ ತೀವ್ರ ಗಾಯಗೊಂಡ ಘಟನೆ ತಾಲೂಕಿನ ಬಾಚಣಕಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ಬರಮಪ್ಪ ವಡ್ಡರ ಗಾಯಗೊಂಡ ವ್ಯಕ್ತಿ. ತನ್ನ ಕುರಿ (ಮೇಕೆ) ಮರಿ ಮೇಯಿಸಲು ಗ್ರಾಮದ ಹೊರವಲಯದ ಕೆರೆ ಬಳಿ ಹೋಗಿದ್ದ ವೇಳೆ ಹೊಳೆಯುವ ವಸ್ತು ನೋಡಿದ ಈತ ಏನಿರಬಹುದೆಂದು ಕುತೂಹಲದಿಂದ ಅದನ್ನು ಹಿಸುಕಿದಾಗ ಸ್ಫೋಟಗೊಂಡಿದೆ ಎನ್ನಲಾಗಿದೆ. ಕೈ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಮುಂಡಗೋಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಮುಂಡಗೋಡ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಗಾಯಾಳುವಿನಿಂದ ಮಾಹಿತಿ ಪಡೆದುಕೊಂಡು ತನಿಖೆ ಕೈಗೊಂಡಿದ್ದಾರೆ.ಪ್ರಾಣಿಗಳ ಬೇಟೆ ಆರೋಪ:ಈ ಭಾಗದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆ ನಿರಂತರವಾಗಿ ನಡೆಯುತ್ತದೆ ಎನ್ನಲಾಗುತ್ತಿದ್ದು, ಇಂತಹ ಕೃತ್ಯಗಳಲ್ಲಿ ಕೆಲ ಅರಣ್ಯ ಇಲಾಖೆ ಸಿಬ್ಬಂದಿಗಳ ಕೈವಾಡ ಕೂಡ ಇರುತ್ತದೆ ಎಂಬ ಆರೋಪ ಕೂಡ ಕೇಳಿ ಬರುತ್ತಿದೆ. ಸಂಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂಬುವುದು ಸಾರ್ವಜನಿಕರ ಆಗ್ರಹವಾಗಿದೆ.