ಕನ್ನಡಪ್ರಭ ವಾರ್ತೆ ಬಾಗಲಕೋಟೆಬಾಗಲಕೋಟೆ ಜಿಲ್ಲಾ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ ಬಂದಿದ್ದು, ಈ ಮೇಲ್ ಹಿನ್ನೆಲೆಯಲ್ಲಿ ಬಾಗಲಕೋಟೆ ಕೋರ್ಟ್ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಬಾಗಲಕೋಟೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸ್ಥಳಕ್ಕೆ ತೆರಳಿ ತಪಾಸಣೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬಾಗಲಕೋಟೆ ಜಿಲ್ಲಾ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ ಬಂದಿದ್ದು, ಈ ಮೇಲ್ ಹಿನ್ನೆಲೆಯಲ್ಲಿ ಬಾಗಲಕೋಟೆ ಕೋರ್ಟ್ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಬಾಗಲಕೋಟೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸ್ಥಳಕ್ಕೆ ತೆರಳಿ ತಪಾಸಣೆ ನಡೆಸಿದರು.13 ಆರ್.ಡಿ.ಎಕ್ಸ್ ಬಾಂಬ್ ಸ್ಫೋಟದ ಎಚ್ಚರಿಕೆ ಬಗ್ಗೆ ಬೆದರಿಕೆ ಮೇಲ್ ಬಂದಿದ್ದು, ಗುರುವಾರ ಕೋರ್ಟ್‌ನಲ್ಲಿ 13 ಪಾಯ್ಸನ್ ಗ್ಯಾಸ್ + ಆರ್.ಡಿ.ಎಕ್ಸ್ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆಯು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ಬಂದಿರುವ ಮೇಲ್‌ನಲ್ಲಿದೆ. ಬುಧವಾರ ರಾತ್ರಿ 1:48ಕ್ಕೆ ಮೇಲ್ ಕಳುಹಿಸಲಾಗಿದೆ. ಮೇಲ್‌ನಲ್ಲಿ ನ್ಯಾಯಾಧೀಶರು ಮತ್ತು ಅಮಾಯಕ ಸಾರ್ವಜನಿಕರನ್ನು ಮಧ್ಯಾಹ್ನ 12 ಗಂಟೆಯೊಳಗೆ ಸ್ಥಳಾಂತರಿಸುವಂತೆ ಎಚ್ಚರಿಕೆ ನೀಡಲಾಗಿತ್ತು.