ಕಾರವಾರ-ಇಳಕಲ್ಲ ರಾಷ್ಟ್ರೀಯ ಹೆದ್ದಾರಿಯಾಗಿಸಲು ಬೊಮ್ಮಾಯಿ ಮನವಿ

| N/A | Published : Aug 08 2025, 02:00 AM IST / Updated: Aug 08 2025, 01:08 PM IST

ಸಾರಾಂಶ

ಉತ್ತರ ಕನಾಟದ ಬಹಳಷ್ಟು ಜನರ ಬೇಡಿಕೆಯಾಗಿರುವ ಕಾರವಾರ-ಇಳಕಲ್ಲ (ಕೈಗಾ) ರಾಷ್ಟ್ರೀಯ ಹೆದ್ದಾರಿಯನ್ನು ಶೀಘ್ರ ಮಂಜೂರು ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು   ಕೇಂದ್ರ ಸಚಿವ ನೀತಿನ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

 ಇಳಕಲ್ಲ :  ಉತ್ತರ ಕನಾಟದ ಬಹಳಷ್ಟು ಜನರ ಬೇಡಿಕೆಯಾಗಿರುವ ಕಾರವಾರ-ಇಳಕಲ್ಲ (ಕೈಗಾ) ರಾಷ್ಟ್ರೀಯ ಹೆದ್ದಾರಿಯನ್ನು ಶೀಘ್ರ ಮಂಜೂರು ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಯ ರಾಷ್ಟ್ರೀಯ ಹೆದ್ದಾರಿಗಳ ಕೇಂದ್ರ ಸಚಿವರ ಕಚೇರಿಯಲ್ಲಿ ಕೇಂದ್ರ ಸಚಿವ ನೀತಿನ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. 

 ಈ ಹಿಂದೆ ಕಾರವಾರ ಇಳಕಲ್ಲ ಕೈಗಾ ರಸ್ತೆ ಎಂದು ಕೇಂದ್ರ ಸರ್ಕಾರ ಗುರುತಿಸಿತ್ತು. ಆದರೆ ಯಾವುದೋ ಕಾರಣಕ್ಕೆ ಈ ಕಾಮಗಾರಿ ಮಂಜೂರ ಆಗದೆ ನೆನೆಗುದಿಗೆ ಬಿದ್ದಿತ್ತು. ಕಾರವಾರ, ಕೈಗಾ, ಮುಂಡಗೋಡ, ಸವಣೂರ, ಗದಗ, ಗಜೇಂದ್ರಗಡ ಮಾರ್ಗವಾಗಿ ಇಳಕಲ್ಲ ತಲುಪುವ ಈ ರಸ್ತೆ 318 ಕಿ.ಮೀ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಘೋಷಣೆ ಮಾಡಿ ಕಾಮಗಾರಿಯನ್ನು ಶೀಘ್ರ ಪ್ರಾರಂಭ ಮಾಡಬೇಕು ಎಂದು ಮನವಿ ಮಾಡಿದರು. ಮಾಜಿ ಮುಖ್ಯಮಂತ್ರಿಗಳ ಮನವಿ ಸ್ವೀಕರಿಸಿದ ಕೇಂದ್ರ ಸಚಿವ ನೀತಿನ್‌ ಗಡ್ಕರಿ ಸಕಾರಾತ್ಮಕವಾಗಿ ಸ್ಮಂದಿಸಿ ಶೀಘ್ರ ಕಾಮಗಾರಿ ಪ್ರಾರಂಭ ಮಾಡಲು ಆದೇಶಿಸುವುದಾಗಿ ಭರವಸೆ ನೀಡಿದರು.

Read more Articles on