ಪ್ರತಿ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಂಡ ಬೊಮ್ಮಾಯಿ

| Published : Jun 05 2024, 12:30 AM IST

ಪ್ರತಿ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಂಡ ಬೊಮ್ಮಾಯಿ
Share this Article
  • FB
  • TW
  • Linkdin
  • Email

ಸಾರಾಂಶ

ಮತ ಎಣಿಕೆ ಸಂದರ್ಭದಲ್ಲಿ ಮೊದಲ ಸುತ್ತಿನಿಂದ ೨೦ನೇ ಸುತ್ತಿನವರೆಗೂ ನಿರಂತರವಾಗಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಮುನ್ನಡೆ ಕಾಯ್ದುಕೊಂಡರು. ಬಿಜೆಪಿ ಅಭ್ಯರ್ಥಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ನಡುವೆ ತೀವ್ರ ಜಿದ್ದಾಜಿದ್ದಿನಿಂದ ಸ್ಪರ್ಧೆ ಕಂಡುಬಂದರೂ ಒಮ್ಮೆಯೂ ಮುನ್ನಡೆ ಸಾಧಿಸುವಲ್ಲಿ ಆನಂದಸ್ವಾಮಿಗೆ ಸಾಧ್ಯವಾಗಲಿಲ್ಲ.

ಹಾವೇರಿ: ಮತ ಎಣಿಕೆ ಸಂದರ್ಭದಲ್ಲಿ ಮೊದಲ ಸುತ್ತಿನಿಂದ ೨೦ನೇ ಸುತ್ತಿನವರೆಗೂ ನಿರಂತರವಾಗಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಮುನ್ನಡೆ ಕಾಯ್ದುಕೊಂಡರು. ಬಿಜೆಪಿ ಅಭ್ಯರ್ಥಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ನಡುವೆ ತೀವ್ರ ಜಿದ್ದಾಜಿದ್ದಿನಿಂದ ಸ್ಪರ್ಧೆ ಕಂಡುಬಂದರೂ ಒಮ್ಮೆಯೂ ಮುನ್ನಡೆ ಸಾಧಿಸುವಲ್ಲಿ ಆನಂದಸ್ವಾಮಿಗೆ ಸಾಧ್ಯವಾಗಲಿಲ್ಲ.

ಏಕಾಂಗಿ ಆಗಿ ಬಂದಿದ್ದ ಗಡ್ಡದೇವರಮಠ...ದೇವಗಿರಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್‌ನ ಮತ ಎಣಿಕೆ ಕೇಂದ್ರಕ್ಕೆ ಮಂಗಳವಾರ ಬೆಳಗ್ಗೆ ೧೦ ಗಂಟೆ ಸುಮಾರಿಗೆ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಏಕಾಂಗಿಯಾಗಿ ಆಗಮಿಸಿದ್ದರು. ಸುಮಾರು ೧೫ನೇ ಸುತ್ತಿನ ನಂತರ ಹಿನ್ನಡೆ ಉಂಟಾದ ಕಾರಣ ಬೇಸರದಿಂದ ವಾಪಸಾದರು. ಪ್ರಮಾಣ ಪತ್ರ ಪಡೆದು ಬೊಮ್ಮಾಯಿ: ಪ್ರತಿ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದ ಬಸವರಾಜ ಬೊಮ್ಮಾಯಿ ಮಧ್ಯಾಹ್ನ ೧೨.೪೦ರ ಸುಮಾರು ಮತ ಎಣಿಕೆ ಕೇಂದ್ರದತ್ತ ಆಗಮಿಸಿದರು. ಮಾಜಿ ಸಚಿವ ಬಿ.ಸಿ.ಪಾಟೀಲ, ಮಾಜಿ ಶಾಸಕರಾದ ಶಿವರಾಜ ಸಜ್ಜನರ, ವಿರುಪಾಕ್ಷಪ್ಪ ಬಳ್ಳಾರಿ, ಭರತ ಬೊಮ್ಮಾಯಿ, ಅರುಣಕುಮಾರ ಪೂಜಾರ ಇತರರು ಸಾಥ್ ನೀಡಿದರು. ಮತ ಎಣಿಕೆ ಮುಗಿಯುತ್ತಿದ್ದಂತೆ ಬೊಮ್ಮಾಯಿ ಅವರು ಪ್ರಮಾಣ ಪತ್ರ ಪಡೆದುಕೊಂಡು ಹೊರಬಂದರು. ಆಗ ಕಾರ್ಯಕರ್ತರು ಗುಲಾಲ ಎರಚಿ ಸಂಭ್ರಮಾಚರಣೆ ಮಾಡಿದರು.