ಸಾರಾಂಶ
ಮಂಜಿಕೇರೆ ಸಮುದಾಯ ಭವನದಲ್ಲಿ ಕಾನ್‌ಬೈಲ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದ ಕಾನ್‌ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಪುಸ್ತಕ ವಾಚನ ಓದಿ ವಿಮರ್ಶೆ ಸಮಾರಂಭ ನಡೆಯಿತು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಪುಸ್ತಕ ಓದು ಹವ್ಯಾಸದಿಂದ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧ ಯೋಜನೆಯ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಪುಸ್ತಕಗಳನ್ನು ಓದುವ ಹವ್ಯಾಸ ಮೂಡಿಸುವ ನಿಟ್ಟಿನಲ್ಲಿ ‘ಓದಿ ವಿಮರ್ಶೆ ಮಾಡುವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಮಾಲಿನಿ ಹೇಳಿದ್ದಾರೆ.ಸೋಮವಾರ ಮಂಜಿಕೇರೆ ಸಮುದಾಯ ಭವನದಲ್ಲಿ ಕಾನ್‌ಬೈಲ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದ ಕಾನ್‌ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಆಯೋಜಿಸಲಾಗಿದ್ದ ಪುಸ್ತಕ ವಾಚನ ಓದಿ ವಿಮರ್ಶೆ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಜನನಿ ತಂಡದ ಸದಸ್ಯೆ ರತ್ನ ಅಧ್ಯಕ್ಷತೆ ವಹಿಸಿದ್ದರು.ಸದಸ್ಯರಿಗೆ ಪುಸ್ತಕಗಳನ್ನು ವಿತರಿಸಿ ವಾಚಿಸಲಾಯಿತು. ಪುಸ್ತಕದಲ್ಲಿ ವಾಚಿಸಿದ ವಾಕ್ಯಗಳನ್ನು ಆರಿಸಿಕೊಂಡು ವಿಮರ್ಶೆ ಮಾಡಿಸುವ ಮೂಲಕ ವಿಜೇತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾನ್‌ಬೈಲ್ ವ್ಯಾಪ್ತಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘಗಳಾದ ಜನನಿ, ಭೂಮಿಕ, ಕನ್ನಿಕ, ಭಗವತಿ ಹಾಗೂ ಧೃತಿ ಸಂಘದ ಸದಸ್ಯರು ಪಾಲ್ಗೊಂಡಿದ್ದರು.ಅಶ್ವಿನಿ ಸ್ವಾಗತಿಸಿದರು. ಕಾವ್ಯಾ ವಂದಿಸಿದರು. ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಖತ್ತೀಜ, ಕಾನ್‌ಬೈಲ್ ವ್ಯಾಪ್ತಿಯ ಸೇವಾ ಪ್ರತಿನಿಧಿ ಯಶೋಧ ಬಸವರಾಜ್ ಮತ್ತಿತರರಿದ್ದರು.