ಕನ್ನಡಪ್ರಭವಾರ್ತೆ ಶಿರಾ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು ಕೈಗೆತ್ತಿಕೊಂಡಿದ್ದು, ಅದಕ್ಕೆ ಬೆಂಬಲವಾಗಿ ತಾಲೂಕಿನ ಪ್ರತಿಯೊಂದು ಬೂತ್‌ಗಳಲ್ಲೂ ಪರಿಷ್ಕರಣೆ ನಡೆಯಲಿದ್ದು, ತಾಲೂಕಿನ ೨೭೪ಬೂತ್‌ಗಳಿಗೂ ಒಬ್ಬೊಬ್ಬ ಪದಾಧಿಕಾರಿಗಳನ್ನು ನೇಮಿಸಿದ್ದೇವ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ಸತ್ಯಪ್ರಕಾಶ್ ಹೇಳಿದರು.

ಈ ಬಗ್ಗೆ ಅವರು ನಗರದ ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ೨೬ರ ಮಂಗಳವಾರ ನಗರದ ಶ್ರೀರಾಮ ಕಲ್ಯಾಣ ಮಂಟಪದಲ್ಲಿ ಶಿರಾ ಕ್ಷೇತ್ರದ ವಿವಿಧ ಘಟಕಗಳ ಪದಾಧಿಕಾರಿಗಳ ಪಟ್ಟಿ ಪ್ರಕಟಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರ ಸ್ವಾಮಿ ಅವರ ಮಾರ್ಗದರ್ಶನದಲ್ಲಿ ಜೆಡಿಎಸ್ ಪಕ್ಷ ಬಲ ವರ್ಧನೆಗೆ ಶಿರಾ ತಾಲೂಕು ಜೆಡಿಎಸ್ ಪಕ್ಷದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ತಿಪ್ಪೇಸ್ವಾಮಿ, ನೂತನ ಜೆಡಿಎಸ್ ಜಿಲ್ಲಾಧ್ಯಕ್ಷ ನಿಂಗಪ್ಪ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು, ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಆರ್.ಸಿ.ಅಂಜಿನಪ್ಪ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದರು.

ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ ಮಾತನಾಡಿ ರಾಜ್ಯದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷವನ್ನು ಮುಂದಿನ ಭಾರಿ ಅಧಿಕಾರಕ್ಕೆ ತರಲು ಕಾರ್ಯೋನ್ಮುಖರಾಗಿದ್ದು, ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಮಾಡಲಾಗುತ್ತಿದೆ. ಇದಕ್ಕಾಗಿ ಜೆಡಿಎಸ್ ಪಕ್ಷದಿಂದ ಬೂತ್‌ ಮಟ್ಟದಲ್ಲಿ ಬಿಎಲ್ಓ ಗಳನ್ನು ನೇಮಕ ಮಾಡಿದ್ದು, ಅವರಿಗೆ ಮಾರ್ಗದರ್ಶನ ನೀಡಲಾಗುವುದು. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಆಗಮಿಸಬೇಕೆಂದು ಮನವಿ ಮಾಡಿದರು. ರಾಜ್ಯ ಜೆಡಿಎಸ್ ಮಾಜಿ ರಾಜ್ಯ ಪರಿಷತ್ ಸದಸ್ಯ ಆರ್ ಉಗ್ರೇಶ್ ಮಾತನಾಡಿ, ೨೬ ರಂದು ಶ್ರೀರಾಮ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಪಕ್ಷದಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದರು. ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ರೆಹಮತ್, ಮಾಜಿ ಜಿ ಪಂ ಉಪಾಧ್ಯಕ್ಷ ಮುದಿಮಡು ರಂಗಾಶಮಯ್ಯ, ನಗರಸಭೆ ಸದಸ್ಯ ಆರ್ ರಾಮು, ನಗರ ಜೆಡಿಎಸ್ ಅಧ್ಯಕ್ಷ ಶ್ರೀರಂಗ, ಬರಗೂರು ಬೋಪಣ್ಣ, ನರಸಿಂಹಮೂರ್ತಿ, ಮಹಿಳಾ ಘಟಕದ ಅಧ್ಯಕ್ಷೆ ರೇಣುಕಮ್ಮ, ಇನಂಗೋಲ್ಲಹಳಿ ಶಿವಣ್ಣ, ಕೋಟೆ ಮಹದೇವ್, ಜಯಮ್ಮ ಸೇರಿದಂತೆ ಹಲವರು ಹಾಜರಿದ್ದರು.