ಸಾರಾಂಶ
ವಿಚಾರಗೋಷ್ಠಿಯಲ್ಲಿ ಕೇರಳದ ಗಡಿನಾಡ ಕನ್ನಡಿಗರ ಸಮಸ್ಯೆ ಮತ್ತು ಪರಿಹಾರದ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಈ ಸಮಾರಂಭದಲ್ಲಿ ಸಮಾಜ ಸೇವೆ, ಶಿಕ್ಷಣ ಕ್ಷೇತ್ರ, ವೈದ್ಯಕೀಯ, ಕಲೆ, ಭಾಷೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಒಟ್ಟು 9 ಮಂದಿ ಗಡಿನಾಡ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ(ರಿ) ಕಾಸರಗೋಡು ಹಾಗೂ ಕರ್ನಾಟಕ ಜಾನಪದ ಪರಿಷತ್ತು ಸಹಯೋಗದಲ್ಲಿ ಅನಂತಪುರದಲ್ಲಿ ‘ಅನಂತರಪುರಿ ಗಡಿನಾಡ ಕನ್ನಡ ಸಾಂಸ್ಕೃತಿಕ ಉತ್ಸವ-2024’ ನಡೆಯಿತು.ಈ ಕಾರ್ಯಕ್ರಮದಲ್ಲಿ ಕೇರಳ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಜಿ.ಆರ್.ಅನಿಲ್, ಬಂದರು ಮತ್ತು ಪುರಾತತ್ವ ಇಲಾಖೆ ಸಚಿವ ಕಡಂಪಳ್ಳಿ ರಾಮಚಂದ್ರನ್, ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್, ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ, ವಿಶ್ರಾಂತ ಕುಲಪತಿ ಹಿ.ಚಿ.ಬೋರಲಿಂಗಯ್ಯ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ರವಿ ನಾಯ್ಕಾಪು, ಕರ್ನಾಟಕ ಸಂಘ ತಿರುವನಂತಪುರ ಕಾರ್ಯದರ್ಶಿ ಡಾ.ಅನಿತಾ ಕುಮಾರಿ ಹೆಗಡೆ ಮತ್ತಿತರರಿದ್ದರು. ದ್ವಾದಶಭಾಷಾ ಕವಿ ಗೋಷ್ಠಿಯಲ್ಲಿ ಕಾಸರಗೋಡಿನ ಹಲವಾರು ಕವಿಗಳು ಹಾಗೂ ಪತ್ರಕರ್ತರು ಭಾಗವಹಿಸಿದ್ದರು. ವಿವಿಧ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಈ ಸಮಾರಂಭದ ಮುಖ್ಯ ವಿಚಾರಗೋಷ್ಠಿಯಲ್ಲಿ ಕೇರಳದ ಗಡಿನಾಡ ಕನ್ನಡಿಗರ ಸಮಸ್ಯೆ ಮತ್ತು ಪರಿಹಾರದ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಈ ಸಮಾರಂಭದಲ್ಲಿ ಸಮಾಜ ಸೇವೆ, ಶಿಕ್ಷಣ ಕ್ಷೇತ್ರ, ವೈದ್ಯಕೀಯ, ಕಲೆ, ಭಾಷೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಒಟ್ಟು 9 ಮಂದಿ ಗಡಿನಾಡ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಯಿತು.