ಬೋರುಗುಡ್ಡೆ: ನೂತನ ಅಂಗನವಾಡಿ ಕೇಂದ್ರ ಲೋಕಾರ್ಪಣೆ

| Published : Nov 07 2024, 12:01 AM IST / Updated: Nov 07 2024, 12:02 AM IST

ಬೋರುಗುಡ್ಡೆ: ನೂತನ ಅಂಗನವಾಡಿ ಕೇಂದ್ರ ಲೋಕಾರ್ಪಣೆ
Share this Article
  • FB
  • TW
  • Linkdin
  • Email

ಸಾರಾಂಶ

ಅಂಗನವಾಡಿ ಶಿಕ್ಷಕಿ ಹಾಗೂ ಅಡುಗೆ ಸಹಾಯಕರನ್ನು ಸನ್ಮಾನಿಸಿ ಗೌರವಿಸಲಾಯಿತು. ‌ಅಂಗನವಾಡಿ ಕೇಂದ್ರಕ್ಕೆ ಕೊಡುಗೆ ನೀಡಿದ ಹಾಗೂ ಸಹಕರಿಸಿದ ಗ್ರಾಮಸ್ಥರಿಗೆ ಗೌರವ ಸ್ಮರಣಿಕೆ‌ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಅನುದಾನ 15 ಲಕ್ಷ ರು. ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 5 ಲಕ್ಷ ರು. ಅನುದಾನದಲ್ಲಿ ನೆಲ್ಲಿಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋರುಗುಡ್ಡೆ ಎಂಬಲ್ಲಿ‌ ನಿರ್ಮಾಣಗೊಂಡಿರುವ ಅಂಗನವಾಡಿ ಕೇಂದ್ರವನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕಾರಗಿ ಲೋಕಾರ್ಪಣೆಗೊಳಿಸಿದರು.

ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ಪಂಚಾಯಿತಿ ಅಧ್ಯಕ್ಷ ಉದಯ ಪೂಜಾರಿ ವಹಿಸಿದ್ದರು. ಶಿಕ್ಷಣ ಇಲಾಖೆಯ ಅನುದಾನ 3.20 ಹಾಗೂ‌ ನರೇಗಾ ಯೋಜನೆಯಡಿಯಲ್ಲಿ 5 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡಿರುವ ಶಾಲಾ ಶೌಚಾಲಯವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹಾಗೂ 12 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಗ್ರಂಥಾಲಯವನ್ನು ಜಿಲ್ಲಾ ಗ್ರಂಥಾಲಯ‌ ಅಧಿಕಾರಿ ಗಾಯತ್ರಿ ಉದ್ಘಾಟಿಸಿದರು.

ಅಂಗನವಾಡಿ ಶಿಕ್ಷಕಿ ಹಾಗೂ ಅಡುಗೆ ಸಹಾಯಕರನ್ನು ಸನ್ಮಾನಿಸಿ ಗೌರವಿಸಲಾಯಿತು. ‌ಅಂಗನವಾಡಿ ಕೇಂದ್ರಕ್ಕೆ ಕೊಡುಗೆ ನೀಡಿದ ಹಾಗೂ ಸಹಕರಿಸಿದ ಗ್ರಾಮಸ್ಥರಿಗೆ ಗೌರವ ಸ್ಮರಣಿಕೆ‌ ನೀಡಲಾಯಿತು.

ಪಂಚಾಯಿತಿ ಉಪಾಧ್ಯಕ್ಷೆ ಸುಶೀಲಾ, ಸದಸ್ಯರಾದ ಜಯಂತ್ ಹೆಗ್ಡೆ, ಆಶಾಲತಾ, ಸುನಂದ, ಧರೆಗುಡ್ಡೆ ಪಂಚಾಯಿತಿ ಸದಸ್ಯರಾದ ಮುನಿರಾಜ್ ಜೈನ್, ಚಾಮುಂಡಿ ದೇವಸ್ಥಾನದ ಮೊಕ್ತೇಸರ ಮಹಾವೀರ ಬಡಕೋಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸತೀಶ್ ಪೂಜಾರಿ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಶಿವಾನಂದ ಪಾಂಡ್ರು, ತಾ.ಪಂ. ಮಾಜಿ ಸದಸ್ಯ ರುಕ್ಕಯ್ಯ ಪೂಜಾರಿ, ದಾನಿಗಳಾದ ಪಿಜಿನ ಪೂಜಾರಿ, ಶೇಖರ ಪೂಜಾರಿ ಕೋರಿಯಾರು, ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಹರೀಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಶೆಟ್ಟಿ, ಮೇಲ್ವಿಚಾರಕಿ ಶುಭಾ ಅತಿಥಿಗಳಾಗಿ ಭಾಗವಹಿಸಿದ್ದರು. ಸ್ತ್ರೀಶಕ್ತಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಸುರೇಂದ್ರ ಸ್ವಾಗತಿಸಿದರು. ನೆಲ್ಲಿಕಾರು ಗ್ರಾಮ ಪಂಚಾಯಿತಿ ಸಿಬ್ಬಂದಿ ಪ್ರಶಾಂತ್ ಜೈನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.