ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿದ ರಾಜ್ಯ ಸಣ್ಣ ನೀರಾವರಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಶ್ರೀ ದೇವಿಯ ದರ್ಶನ ಪಡೆದು, ಋತ್ವೀಜರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.
ಕುಂದಾಪುರ: ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿದ ರಾಜ್ಯ ಸಣ್ಣ ನೀರಾವರಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಶ್ರೀ ದೇವಿಯ ದರ್ಶನ ಪಡೆದು, ಋತ್ವೀಜರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.
ಮಂಗಳವಾರ ರಾತ್ರಿ ಕೊಲ್ಲೂರಿನಲ್ಲಿ ವಾಸ್ತವ್ಯ ಹೂಡಿದ್ದ ಸಚಿವರು ಬುಧವಾರ ಬೆಳಗ್ಗೆ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವಸ್ಥಾನದ ವತಿಯಿಂದ ಸಚಿವರನ್ನು ಸ್ವಾಗತಿಸಲಾಗಿತ್ತು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ ಅವರು ಸಚಿವ ಎನ್.ಎಸ್.ಬೋಜರಾಜು ಅವರನ್ನು ಗೌರವಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯ ರಘುರಾಮ ದೇವಾಡಿಗ ಆಲೂರು, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಇದ್ದರು.