ಮೈಸೂರಿನಲ್ಲಿ ನ.೨೬ರಂದು ಸರ್ಕಾರದ ವತಿಯಿಂದ ಆಯೋಜಿಸಿರುವ ಸಂವಿಧಾನ ದಿನಾಚರಣೆ ಸ್ವಾರ್ಥ ಮತ್ತು ಸ್ವಪ್ರತಿಷ್ಠೆ ಕಾರ್ಯಕ್ರಮವಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳೂ ಸಂವಿಧಾನ ವಿರೋಧಿಗಳಾಗಿದ್ದು, ಸಂವಿಧಾನ ದಿನ ಆಚರಿಸುವ ನೈತಿಕತೆ ಕಳೆದುಕೊಂಡಿವೆ ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆರೋಪಿಸಿದರು,
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಮೈಸೂರಿನಲ್ಲಿ ನ.೨೬ರಂದು ಸರ್ಕಾರದ ವತಿಯಿಂದ ಆಯೋಜಿಸಿರುವ ಸಂವಿಧಾನ ದಿನಾಚರಣೆ ಸ್ವಾರ್ಥ ಮತ್ತು ಸ್ವಪ್ರತಿಷ್ಠೆ ಕಾರ್ಯಕ್ರಮವಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳೂ ಸಂವಿಧಾನ ವಿರೋಧಿಗಳಾಗಿದ್ದು, ಸಂವಿಧಾನ ದಿನ ಆಚರಿಸುವ ನೈತಿಕತೆ ಕಳೆದುಕೊಂಡಿವೆ ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆರೋಪಿಸಿದರು,ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಸಮಾರಂಭಕ್ಕೆ ರಾಜ್ಯದ ಎಸ್ಸಿ ಎಸ್ಟಿಗಳ ಅಭಿವೃದ್ಧಿಗೆ ಬಳಸಬೇಕಾಗಿದ್ದ, ಎಸ್ಸಿಎಸ್ಪಿ ಮತ್ತು ಟಿಎಸ್ಪಿಯ ಸುಮಾರು ೧೬ ಕೋಟಿ ರುಪಾಯಿ ಬಳಸುತ್ತಿದ್ದಾರೆ. ಸಂವಿಧಾನ ದಿನಾಚರಣೆ ಕೇವಲ ಎಸ್ಸಿ ಎಸ್ಟಿ ಗಳಿಗೆ ಸಂಬಂಧಪಟ್ಟ ಕಾರ್ಯಕ್ರಮವೇ? ಇದಕ್ಕಾಗಿ ದಲಿತ ಕಾಲೋನಿಗಳಿಗೆ ಮಾತ್ರ ಬಸ್ಸುಗಳನ್ನು ಕಳುಹಿಸಲಾಗುತ್ತಿದೆ ಎಂದರು.
ಇಬ್ಬರು ಮಂತ್ರಿಗಳು ತಮ್ಮ ಸ್ವಪ್ರತಿಷ್ಠೆ ಹಾಗೂ ಸ್ವಾರ್ಥ ಮತ್ತು ಒಬ್ಬ ವ್ಯಕ್ತಿಗೊಸ್ಕರ, ಸಂವಿಧಾನದ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಮೇಲಿರುವ ಗೌರವವಲ್ಲ, ಬದಲಿಗೆ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಬೃಹತ್ ಸಮಾವೇಶವನ್ನು ವಿಫಲಗೊಳಿಸಲು ನಡೆಸಿರುವ ಸಂಚು ಎಂದರು.ಒಂದು ವೇಳೆ ಕಾಂಗ್ರೆಸ್ ಸರ್ಕಾರಕ್ಕೆ ನಿಜವಾಗಿಯೂ ಸಂವಿಧಾನದ ಬಗ್ಗೆ ಗೌರವ ಇದ್ದರೆ ರಾಜ್ಯದ ೩೧ ಜಿಲ್ಲೆಗಳಲ್ಲೂ ಸಂವಿಧಾನ ದಿನಾಚರಣೆ ಆಚರಿಸಬೇಕಿತ್ತು. ರಾಜ್ಯ ಕಾಂಗ್ರೆಸ್ ಮತ್ತು ಕೇಂದ್ರ ಬಿಜೆಪಿ ಸರ್ಕಾರಗಳಿಗೆ ನೈತಿಕತೆ ಇದ್ದರೆ ರಾಜ್ಯ ಮತ್ತು ಕೇಂದ್ರಗಳಲ್ಲಿ ಖಾಲಿ ಇರುವ ಬ್ಯಾಕ್ಲಾಗ್ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಲಿ ಎಂದು ಆಗ್ರಹಿಸಿದರು.
ಸಂವಿಧಾನದ ಹೆಸರಿನಲ್ಲಿ ದಲಿತರ ಹಣವನ್ನು ದುರ್ಬಳಕೆ ಮಾಡಿಕೊಂಡು ಪರೋಕ್ಷವಾಗಿ ಕಾಂಗ್ರೆಸ್ ಕಾರ್ಯಕ್ರಮ ಮಾಡಲು ಹೊರಟಿದ್ದಾರೆ, ಇದನ್ನು ದಲಿತ ಸಮುದಾಯ ಅರ್ಥಮಾಡಿಕೊಳ್ಳಬೇಕು ಎಂದರುಬಹುಜನ ಸಮಾಜ ಪಾರ್ಟಿಯನ್ನು ದಾದಾಸಾಹೇಬ್ ಕಾನ್ಷಿರಾಮ್ ಸ್ಥಾಪಿಸುವವರೆಗೆ ಕಾಂಗ್ರೆಸ್ ಬಿಜೆಪಿ ಹಾಗೂ ದೇಶದಲ್ಲಿರುವ ಯಾವುದೇ ಪಕ್ಷಗಳ ಕಚೇರಿಯಲ್ಲಿ ಅಂಬೇಡ್ಕರ್ ಫೋಟೋ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದ ಉದಾಹರಣೆ ಇಲ್ಲ ಎಂದರು,
ಬಿಜೆಪಿ ಸರ್ಕಾರದ ಮಂತ್ರಿಯಾಗಿದ್ದ ಅನಂತಕುಮಾರ್ ಹೆಗಡೆ ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದಿದ್ದರು. ಮಾಜಿ ಮಂತ್ರಿ ಸಿ.ಟಿ.ರವಿ ಅಂದು ಬಿಜೆಪಿ ಸರ್ಕಾರ ಇದ್ದಿದ್ದರೆ, ಈ ಸಂವಿಧಾನವನ್ನು ಒಪ್ಪುತ್ತಿರಲಿಲ್ಲ ಎಂದಿದ್ದಾರೆ.ಬಿಜೆಪಿಯ ಮಾತೃ ಸಂಸ್ಥೆಗಳಾದ ಆರ್ಎಸ್ಎಸ್, ಹಿಂದೂ ಮಹಾಸಭಾ ಬಾಬಾಸಾಹೇಬರ ಸಂವಿಧಾನವನ್ನು ವಿರೋಧಿಸುತ್ತಾ, ಇದರಲ್ಲಿ ಭಾರತೀಯತೆ ಇಲ್ಲ, ಹಾಗಾಗಿ ಈ ಸಂವಿಧಾನವನ್ನು ಒಪ್ಪುವುದಿಲ್ಲ ಎಂದಿದ್ದರು.
ಅಹಿಂದ ನಾಯಕ, ಸಮಾಜವಾದಿ ಎಂದು ಹೇಳಿಕೊಳ್ಳುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಊರಾದ ಸಿದ್ದರಾಮಯ್ಯನಹುಂಡಿಯಲ್ಲಿ ಅಸ್ಪುಶ್ಯೃತೆ ಇನ್ನು ಜೀವಂತವಾಗಿದೆ ಎಂದು ಆರೋಪಿಸಿದರು.ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ನಾಗಯ್ಯ, ರಾಜ್ಯ ಕಾರ್ಯದರ್ಶಿ ಕೊಳ್ಳೇಗಾಲ ಮಣಿ ಹಾಗೂ ಬ್ಯಾಡಮೂಡ್ಲು ಬಸವಣ್ಣ,ಲೋಕಸಭಾ ಉಸ್ತುವಾರಿ ವಕೀಲ ಪುಟ್ಟಸ್ವಾಮಿ, ಜಿಲ್ಲಾಧ್ಯಕ್ಷ ಬ.ಮ.ಕೃಷ್ಣಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಚವಾಡಿ ಪ್ರಕಾಶ್ ಇದ್ದರು.