ಇಂದಿನಿಂದ ‘ಬೊಟ್ಟೋಳಂಡ ಕಪ್’ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ- 2024

| Published : Apr 18 2024, 02:26 AM IST

ಇಂದಿನಿಂದ ‘ಬೊಟ್ಟೋಳಂಡ ಕಪ್’ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ- 2024
Share this Article
  • FB
  • TW
  • Linkdin
  • Email

ಸಾರಾಂಶ

ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಮೈದಾನದಲ್ಲಿ ಮೂರನೇ ವರ್ಷದ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ- 2024 ಬೊಟ್ಟೋಳಂಡ ಕಪ್ ಉತ್ಸವ ನಡೆಯಲಿದ್ದು ಇದರ ಅಂಗವಾಗಿ ಗುರುವಾರ ಬೆಳಗ್ಗೆ 9 ಗಂಟೆಗೆ ಶ್ರೀರಾಮ ಮಂದಿರದಿಂದ ಮೆರವಣಿಗೆ, 10.15ಕ್ಕೆ ಮೈದಾನದಲ್ಲಿ ಧ್ವಜಾರೋಹಣ ನೆರವೇರಲಿದೆ.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಮೂರನೇ ವರ್ಷದ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ- 2024 ಬೊಟ್ಟೋಳಂಡ ಕಪ್ ಉತ್ಸವ ಬೊಟ್ಟೋಳಂಡ ಕುಟುಂಬದವರ ಸಾರಥ್ಯದಲ್ಲಿ ಗುರುವಾರದಿಂದ ಏ. 21 ರವರೆಗೆ ನಡೆಯಲಿದೆ. ಗುರುವಾರ ಕೂಟಕ್ಕೆ ಚಾಲನೆ ದೊರಕಲಿದೆ.ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಮೈದಾನದಲ್ಲಿ ಕೊಡವ ಕುಟುಂಬಗಳ ನಡುವೆ ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಲಿದ್ದು ಇದರ ಅಂಗವಾಗಿ ಬೆಳಗ್ಗೆ 9 ಗಂಟೆಗೆ ಶ್ರೀರಾಮ ಮಂದಿರದಿಂದ ಮೆರವಣಿಗೆ, 10.15ಕ್ಕೆಮೈದಾನದಲ್ಲಿ ಧ್ವಜಾರೋಹಣ ನೆರವೇರಲಿದೆ.

ಬಳಿಕ ಪುರುಷರ ಪ್ರದರ್ಶನ ಪಂದ್ಯ 11 ಗಂಟೆಗೆ ನಡೆಯಲಿದೆ. ನಾಪೋಕ್ಲು ಕೊಡವ ಸಮಾಜ ಮತ್ತು ಅಮ್ಮತ್ತಿ ಕೊಡವ ಸಮಾಜ ತಂಡಗಳ ನಡುವೆ ಪುರುಷರ ಪ್ರದರ್ಶನ ಪಂದ್ಯ ನಡೆಯಲಿದೆ. ಮಹಿಳೆಯರ ಪ್ರದರ್ಶನ ಪಂದ್ಯ 11.30 ಕ್ಕೆ ನಡೆಯಲಿದ್ದು ನಾಪೋಕ್ಲು ಕೊಡವ ಸಮಾಜ ಹಾಗೂ ಬಾಳಲೆ ಕೊಡವ ಸಮಾಜದ ನಡುವೆ ಪ್ರದರ್ಶನ ಪಂದ್ಯ ನಡೆಯಲಿದೆ.

ಉದ್ಘಾಟನಾ ಸಮಾರಂಭದಲ್ಲಿ ಪೇರೂರು ಗ್ರಾಮದ ಕುಟುಂಬದ ಪಟ್ಟೆದಾರ ಬೊಟ್ಟೋಳಂಡ ಪೂಣಚ್ಚ, ಕಾಫಿ ಬೆಳೆಗಾರ ಬೊಟ್ಟೋಳಂಡ ವಾಸು ಮುತ್ತಪ್ಪ, ನಿವೃತ್ತ ಸರ್ಕಲ್ ಇನ್ಸ್ ಪೆಕ್ಟರ್ ಎಂ.ಲಿಂಗಪ್ಪ , ಕೊಳಕೇರಿ ಗ್ರಾಮದ ಕಾಫಿ ಬೆಳೆಗಾರ ಬೊಟ್ಟೋಳಂಡ ಡಾಲು ಸೋಮಯ್ಯ, ಕ್ರೀಡಾ ಸಮಿತಿ ಅಧ್ಯಕ್ಷ ಬೊಟ್ಟೋಳಂಡ ಬಿ. ಗಣೇಶ್ ಗಣಪತಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕ ಡಾ.ಮಂತರ್ ಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೆರ ಬಾಂಡ್ ಗಣಪತಿ, ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಮೇದುರ ವಿಶಾಲ ಕುಶಾಲಪ್ಪ, ಟೂರ್ನಮೆಂಟ್ ಡೈರೆಕ್ಟರ್ ಪೊನ್ನೋಲತಂಡ ಕಿರಣ್ ಪೊನ್ನಪ್ಪ, ಪೊನ್ನೋಲತಂಡ ಕುಟುಂಬದ ಅಧ್ಯಕ್ಷ ಪೊನ್ನೋಲತಂಡ ಬಿದ್ದಯ್ಯ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ,ಚೆಟ್ಟಂಗಡ ಕುಟುಂಬದ ಕಾರ್ಯದರ್ಶಿ ಚೆಟ್ಟಂಗಡ ರವಿ ಸುಬ್ಬಯ್ಯ, ಡಿವೈಎಸ್ ಪಿ ಮಹೇಶ್ ಕುಮಾರ್, ಸರ್ಕಲ್ ಇನ್‌ಸ್ಪೆಕ್ಟರ್ ಅರುಣ್, ಠಾಣಾಧಿಕಾರಿ ಮಂಜುನಾಥ್ ಪಾಲ್ಗೊಳ್ಳಲಿದ್ದಾರೆ.