ಸಾರಾಂಶ
ಓದಿನ ಕಡೆ ಹೆಚ್ಚಿನ ಗಮನ ಕೊಡದೆ ಸದಾ ಮೊಬೈಲ್ ಹಾಗೂ ಲ್ಯಾಪ್‌ಟಾಪ್‌ಗಳಲ್ಲೇ ಕಾಲ ಕಳೆಯುತ್ತಿದ್ದ. ಪೋಷಕರು ಸಾಕಷ್ಟು ಬಾರಿ ಬುದ್ದಿ ಹೇಳಿದರೂ ಆಕಾಶ್ ತನ್ನ ಈ ಗೀಳನ್ನು ಬಿಟ್ಟಿರಲಿಲ್ಲ.
ಹಾಸನ:ಸರಿಯಾಗಿ ಓದುತ್ತಿಲ್ಲ ಎನ್ನುವ ಕಾರಣಕ್ಕೆ ಪೋಷಕರು ಫೋನ್ ಹಾಗೂ ಲ್ಯಾಪ್‌ಟಾಪ್ ಕಿತ್ತಿಟ್ಟಿದ್ದರಿಂದ ಮನನೊಂದ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.ನಗರದ ಹುಣಸಿನಕೆರೆ ಬಡಾವಣೆ ನಿವಾಸಿ 17 ವರ್ಷದ ಆಕಾಶ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಾತ. ಈತ ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ. ಆದರೆ, ಓದಿನ ಕಡೆ ಹೆಚ್ಚಿನ ಗಮನ ಕೊಡದೆ ಸದಾ ಮೊಬೈಲ್ ಹಾಗೂ ಲ್ಯಾಪ್‌ಟಾಪ್‌ಗಳಲ್ಲೇ ಕಾಲ ಕಳೆಯುತ್ತಿದ್ದ. ಪೋಷಕರು ಸಾಕಷ್ಟು ಬಾರಿ ಬುದ್ದಿ ಹೇಳಿದರೂ ಆಕಾಶ್ ತನ್ನ ಈ ಗೀಳನ್ನು ಬಿಟ್ಟಿರಲಿಲ್ಲ. ಇದರಿಂದ ಬೇಸತ್ತ ಪೋಷಕರು ಮೊಬೈಲ್ ಹಾಗೂ ಲ್ಯಾಪ್‌ಟಾಪನ್ನು ಅನಿಂದ ಕಿತ್ತಿಟ್ಟಿದ್ದಾರೆ. ಇದರಿಂದ ಬೇಸತ್ತ ಆತ ಮನೆಯಲ್ಲೇ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ.ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.