ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಮುಂದಿನ ವರ್ಷ ಫೆ. 16ರಿಂದ ಮಾ. 3ರವರೆಗೆ ಶ್ರೀ ದೇವರಿಗೆ ಬ್ರಹ್ಮ ಕುಂಭಾಭಿಷೇಕ ಹಾಗೂ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ತಂತ್ರಿಗಳಾದ ಕಳತ್ತೂರು ಕರುಣಾಕರ ತಂತ್ರಿ ಹೇಳಿದರು.
ಮೂಲ್ಕಿ: ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಮುಂದಿನ ವರ್ಷ ಫೆ. 16ರಿಂದ ಮಾ. 3ರವರೆಗೆ ಶ್ರೀ ದೇವರಿಗೆ ಬ್ರಹ್ಮ ಕುಂಭಾಭಿಷೇಕ ಹಾಗೂ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ತಂತ್ರಿಗಳಾದ ಕಳತ್ತೂರು ಕರುಣಾಕರ ತಂತ್ರಿ ಹೇಳಿದರು. ಭಾನುವಾರ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಶ್ರೀ ದೇವರ ಅಷ್ಟ ಬಂದ ಬ್ರಹ್ಮ ಕಲಶೋತ್ಸವದ ಶುಭದಿನದ ಘೋಷಣೆ ಮಾಡಿ ಸಾಮೂಹಿಕ ಪ್ರಾರ್ಥನೆ ನೆರವೇರಿಸಿ ಮಾತನಾಡಿದರು. ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿ ದೇವಸ್ಥಾನದ ಜೀರ್ಣೋದ್ಧಾರದಿಂದ ಗ್ರಾಮದ ಅಭಿವೃದ್ಧಿ ಸಾಧ್ಯ, ಗ್ರಾಮಸ್ಥರ ಸಹಮತದಿಂದ ದೇವಸ್ಥಾನದ ಸಾನಿಧ್ಯ ವೃದ್ದಿಯಾಗಲೆಂದು ಹೇಳಿದರು. ಈ ಸಂದರ್ಭ ವಾಸ್ತುತಜ್ಞ ಸುಬ್ರಹ್ಮಣ್ಯ ಭಟ್ ಗುಂಡಿ ಬೈಲು, ಕ್ಷೇತ್ರದ ಅರ್ಚಕ ಶಶಾಂಕ್ ಮುಚ್ಚಿಂತಾಯ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಕ್ಷೇತ್ರದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವ ಪುನರೂರು, ರಾಮಮೂರ್ತಿ ರಾವ್, ವಿಷ್ಣುಮೂರ್ತಿ ಆಚಾರ್ಯ, ವಿಪ್ರ ಸಂಪದದ ಅಧ್ಯಕ್ಷ ಸುಧಾಕರ್ ರಾವ್, ವೆಂಕಟರಮಣ ಮುಚ್ಚಿಂತಾಯ, ತೋಕೂರು, ದೇವಸ್ಥಾನದ ಆಡಳಿತ ಮೊಕ್ತೇಸರ ಗುರುರಾಜ್ ಎಸ್. ಪೂಜಾರಿ, ಸುರೇಶ್ ರಾವ್ ನೀರಳಿಕೆ, ಭುವನಾಭಿರಾಮ ಉಡುಪ, ದೇವಪ್ರಸಾದ್ ಪುನರೂರು, ಪಟೇಲ್ ವಿಶ್ವನಾಥ ರಾವ್, ಗೋಪಿನಾಥ ರಾವ್, ಪುರಂದರ ಶೆಟ್ಟಿಗಾರ್, ರವಿ ಶೆಟ್ಟಿ ಪುನರೂರು ಗುತ್ತು, ಲೀಲಾದರ ಶೆಟ್ಟಿ, ಸುರೇಶ್ ಶೆಟ್ಟಿ, ರಾಘವೇಂದ್ರ ರಾವ್, ಧನಂಜಯ ಶೆಟ್ಟಿಗಾರ ಪಕ್ಷಿಕೆರೆ ಉಪಸ್ಥಿತರಿದ್ದರು.