ಗುಬ್ಬಿ: ತಾಲೂಕಿನ ಹಾಗಲವಾಡಿ ಹೋಬಳಿಯ ಮುಚ್ಚವೀರನಹಳ್ಳಿ ಗ್ರಾಮದ ಶ್ರೀ ಕಂಬದ ನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ನಡುವೆ ವೈಭವದಿಂದ ಜರುಗಿತು. ರಥೋತ್ಸವ ಪ್ರಯುಕ್ತ ಶ್ರೀ ಕಂಬದ ನರಸಿಂಹಸ್ವಾಮಿಗೆ ಅಭಿಷೇಕ , ಪಂಚಾಮೃತ ಅಭಿಷೇಕ ಹೋಮ ಹವನಗಳು ನಡೆದವು. ಸ್ವಾಮಿಗೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು. ಮಧ್ಯಾಹ್ನ ಆರಂಭವಾದ ರಥೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿ ರಥಕ್ಕೆ ಬಾಳೆಹಣ್ಣು ದವನ ಎಸೆದು ಭಕ್ತಿ ಸಮರ್ಪಿಸಿದರು. ರಥೋತ್ಸವಕ್ಕೆ ಮಂಚಲದೊರೆ ಶ್ರೀಕೆಂಪಮ್ಮ ದೇವರುಗಳ ಆಗಮನದೊಂದಿಗೆ ರಥೋತ್ಸವ ಪ್ರಾರಂಭವಾಯಿತು. ರಥೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಅಲ್ಲಲ್ಲಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.
ಶ್ರೀ ಕಂಬದ ನರಸಿಂಹಸ್ವಾಮಿಯ ಬ್ರಹ್ಮ ರಥೋತ್ಸವ
ಗುಬ್ಬಿ: ತಾಲೂಕಿನ ಹಾಗಲವಾಡಿ ಹೋಬಳಿಯ ಮುಚ್ಚವೀರನಹಳ್ಳಿ ಗ್ರಾಮದ ಶ್ರೀ ಕಂಬದ ನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ನಡುವೆ ವೈಭವದಿಂದ ಜರುಗಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.