ಸಾರಾಂಶ
ಕನ್ನಡಪ್ರಭ ವಾರ್ತೆ ಕಾಪು
ಇಲ್ಲಿನ ಸಂಪೂರ್ಣ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ವತಿಯಿಂದ ಉಡುಪಿಯಲ್ಲಿ ನಗರ ಸಮಿತಿಯ ಕಚೇರಿ ಉದ್ಘಾಟನೆ ಗುರುವಾರ ನೆರವೇರಿತು.ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕಚೇರಿಯನ್ನು ದೀಪ ಬೆಳಗಿಸಿ ಉದ್ಘಾಟನೆ ನರವೇರಿಸಿದರು. ನಂತರ ಮಾತನಾಡಿದ ಅವರು, ನವದುರ್ಗಾ ಐಕ್ಯ ಸ್ವರೂಪಿಣಿಯಾಗಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಶ್ರೀ ಮಾರಿಯಮ್ಮ ದೇವಿಯ ಸನ್ನಿಧಿಯಲ್ಲಿ ನಡೆಯುತ್ತಿರುವ ಸಮಗ್ರ ಜೀರ್ಣೋದ್ಧಾರ, ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಇತ್ಯಾದಿ ಎಲ್ಲಾ ಪುಣ್ಯ ಕಾರ್ಯಕ್ರಮಗಳ ಯಶಸ್ಸಿಗೆ ಕಾಪುವಿನ ಅಮ್ಮನ ಮಕ್ಕಳಾಗಿ ಸೇವೆ ಸಲ್ಲಿಸೋಣ ಎಂದರು.ಈ ಸಮಾರಂಭದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ನಗರಸಭಾ ಸದಸ್ಯರಾದ ಅಮೃತಾ ಕೃಷ್ಣಮೂರ್ತಿ, ರಮೇಶ್ ಕಾಂಚನ್, ಬಾಲಕೃಷ್ಣ ಶೆಟ್ಟಿ, ಗಿರೀಶ್ ಅಂಚನ್, ಶ್ರೀ ಕ್ಷೇತ್ರದ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳಾದ ಬಾಲಾಜಿ ಯೋಗೀಶ್ ಶೆಟ್ಟಿ, ಸಾಯಿರಾಧ ಮನೋಹರ ಶೆಟ್ಟಿ, ವೀಣಾ ಎಸ್. ಶೆಟ್ಟಿ ಮತ್ತು ಜನಪ್ರತಿನಿಧಿಗಳು ಹಾಗೂ ಶ್ರೀ ಕ್ಷೇತ್ರದ ಭಗವದ್ಭಕ್ತರು ಉಪಸ್ಥಿತರಿದ್ದರು.