ಸಾರಾಂಶ
ಕಾಪು ತಾಲೂಕು ಆಡಳಿತದ ವತಿಯಿಂದ ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜನ್ಮ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಕಾಪು
ಕಾಪು ತಾಲೂಕು ಆಡಳಿತದ ವತಿಯಿಂದ ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜನ್ಮ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಸಮಸ್ತ ಹಿಂದುಳಿದ ವರ್ಗಗಳ ಸಮುದಾಯನ್ನು ಕಾಡುತ್ತಿದ್ದ ಅಸ್ಪೃಶ್ಯತೆ, ಅಸಮಾನತೆ, ಜಾತೀಯತೆ, ಬಾಲ್ಯ ವಿವಾಹ ಸಹಿತ ಹಲವಾರು ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸುವಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ನಡೆಸಿದ ಹೋರಾಟ ಅವಿಸ್ಮರಣೀಯವಾಗಿದೆ. ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶವನ್ನು ನಾವು ಜೀವನದುದ್ದಕ್ಕೂ ಪಾಲಿಸೋಣ ಎಂದರು.ಕಾರ್ಯಕ್ರಮ ಅಧ್ಯಕ್ಷತೆಯನ್ನು ಕಾಪು ತಹಸೀಲ್ದಾರ್ ಡಾ. ಪ್ರತಿಭಾ ಆರ್. ವಹಿಸಿದ್ದರು.
ಪತ್ರಕರ್ತ ರಾಕೇಶ್ ಕುಂಜೂರು, ಬ್ರಹ್ಮಶ್ರೀ ನಾರಾಯಣಗುರುಗಳ ಜೀವನಾದರ್ಶ ಮತ್ತು ಸಂದೇಶದ ಕುರಿತಾಗಿ ಮಾತನಾಡಿದರು.ಈ ಸಂದರ್ಭ ಕಾಪು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ, ತಾಲೂಕಿನ ಬಿಲ್ಲವ ಸಂಘದ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.