ಬ್ರಹ್ಮಶ್ರೀ ನಾರಾಯಣಗುರುಗಳ ಜೀವನಾದರ್ಶ ಸಮಾಜಕ್ಕೆ ದಾರಿದೀಪ: ಶಾಸಕ ಸುರೇಶ್ ಶೆಟ್ಟಿ

| Published : Sep 08 2025, 01:01 AM IST

ಬ್ರಹ್ಮಶ್ರೀ ನಾರಾಯಣಗುರುಗಳ ಜೀವನಾದರ್ಶ ಸಮಾಜಕ್ಕೆ ದಾರಿದೀಪ: ಶಾಸಕ ಸುರೇಶ್ ಶೆಟ್ಟಿ
Share this Article
  • FB
  • TW
  • Linkdin
  • Email

ಸಾರಾಂಶ

ಮಣಿಪುರ ನಾರಾಯಣ ಗುರು ಸಭಾಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಗುರುಗಳ 171 ನೇ ಜಯಂತಿ ಕಾರ್ಯಕ್ರಮ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ಸಂದೇಶ ನೀಡಿದ, ದನಿಯಿಲ್ಲದವರ ದನಿಯಾಗಿ, ಶಕ್ತಿ ಇಲ್ಲದವರಿಗೆ ಆತ್ಮವಿಶ್ವಾಸವಾಗಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರೇರೇಪಿಸಿದ ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶ ಜೀವನ ಎಲ್ಲರಿಗೂ ದಾರಿದೀಪ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಭಿಪ್ರಾಯಪಟ್ಟರು.ಅವರು ಭಾನುವಾರ ಮಣಿಪುರ ನಾರಾಯಣ ಗುರು ಸಭಾಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಗುರುಗಳ 171 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಹಬ್ಬದ ಮಾದರಿಯಲ್ಲಿ ಸಡಗರದಿಂದ ಗುರುಗಳ ಜಯಂತಿಯನ್ನು ಆಚರಿಸಿ ಅವರ ಜೀವನ ಸಂದೇಶಗಳನ್ನು ಜನರಿಗೆ ತಿಳಿಸುವ ಈ ಕಾರ್ಯ ಶ್ಲಾಘನೀಯ. ಗುರುಗಳ ಸಂದೇಶಗಳನ್ನು ಮುಂದಿನ ಪೀಳಿಗೆಗಳಿಗೂ ದಾಟಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.ಯುವ ವಾಹಿನಿ ಅಧ್ಯಕ್ಷ ದಯಾನಂದ ಕರ್ಕೇರ ನಾರಾಯಣ ಗುರುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. 216 ಗಂಟೆಗಳ ನಿರಂತರ ಭರತನಾಟ್ಯ ದಾಖಲೆ ಮಾಡಿರುವ ವಿದುಷಿ ದೀಕ್ಷಾ ಅವರನ್ನು ಸನ್ಮಾನಿಸಲಾಯಿತು. ಬ್ರಹ್ಮಶ್ರೀ ನಾರಾಯಣ ಗುರುಗಳ ಬದುಕು ಮತ್ತು ಸಾಧನೆ ಕುರಿತ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಉಡುಪಿ ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮಣಿಪುರ ಗ್ರಾಪಂ ಅಧ್ಯಕ್ಷೆ ಚೈತ್ರ, ಜಿಪಂ ಉಪ ಕಾರ್ಯದರ್ಶಿ ಎಸ್.ಎಸ್.ಕದ್ರೋಳಿ, ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಅಧ್ಯಕ್ಷ ನಟರಾಜ್ ಪೂಜಾರಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಮಹೇಶ್ ನಿರೂಪಿಸಿ, ಚಂದ್ರಶೇಖರ್ ಸಾಲ್ಯಾನ್ ವಂದಿಸಿದರು.